ಅಮೆಜಾನ್ ಕಂಪೆನಿಯ ಉದ್ಯೋಗಿ, ಯುವ ಇಂಜಿನಿಯರ್ ಆತ್ಮಹತ್ಯೆಗೆ ಶರಣು

ವಿಜಯನಗರ: ಬೆಂಗಳೂರಿನಲ್ಲಿ ಅಮೇಜಾನ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಯುವ ಇಂಜಿನಿಯರ್ ಓರ್ವನು ಹರಪನಹಳ್ಳಿಯ ತನ್ನ ಮನೆಯಲ್ಲಿ ಆತ್ಮಹತ್ಯೆ ಶರಣಾಗಿದ್ದಾನೆ. 

ಹರಪನಹಳ್ಳಿ ಪಟ್ಟಣದ ಎಡಿಬಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಜಿ.ಉಮೇಶ ಎಂಬವರ ಕಿರಿಯ ಪುತ್ರ ಜಿ.ಪ್ರಜ್ವಲ್(23) ಮೃತ ದುರ್ದೈವಿ. 

ಇಂಜಿನಿಯರಿಂಗ್ ವಿದ್ಯಾಭ್ಯಾಸ ಪೂರೈಸಿರುವ ಪ್ರಜ್ವಲ್ ಬೆಂಗಳೂರಿನ ಅಮೆಜಾನ್ ಕಂಪನಿಯಲ್ಲಿ​ ಕೆಲಸ ಮಾಡುತ್ತಿದ್ದರು. ನಾಲ್ಕು ದಿನಗಳ ಹಿಂದೆಯಷ್ಟೇ ಹರಪನಹಳ್ಳಿ ಪಟ್ಟಣದ ಆಚಾರ್ಯ ಬಡಾವಣೆಯಲ್ಲಿರುವ ತನ್ನ ಮನೆಗೆ ಪ್ರಜ್ವಲ್ ಬಂದಿದ್ದ. ನಿನ್ನೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 

ಈ ಬಗ್ಗೆ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.