ನವದೆಹಲಿ: 34 ವರ್ಷಗಳ ಹಳೆಯ ಮಾರಣಾಂತಿಕವಾಗಿ ಥಳಿಸಿರುವ ಪ್ರಕರಣವೊಂದರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧುಗೆ ಸುಪ್ರೀಂ ಕೋರ್ಟ್ ಒಂದು ವರ್ಷದ ಕಾರಾಗೃಹ ಶಿಕ್ಷೆ ವಿಧಿಸಿದೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.
1988ರ ಡಿಸೆಂಬರ್ 27ರಂದು ನವಜೋತ್ ಸಿಂಗ್ ಸಿಧು ಅವರು ಪಟಿಯಾಲ ನಿವಾಸಿ ಗುರ್ನಾಮ್ ಸಿಂಗ್ ಅವರ ತಲೆಗೆ ಹೊಡೆದಿದ್ದು, ಇದು ಅವರ ಮರಣಕ್ಕೆ ಕಾರಣವಾಗಿದೆ. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತ್ತಿತ್ತು. ಇದೀಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನವಜೋತ್ ಸಿಂಗ್ ಸಿಧುಗೆ ಒಂದು ವರ್ಷದ ಕಾರಾಗೃಹ ಶಿಕ್ಷೆ ವಿಧಿಸಿದೆ.
ಈ ಹಿನ್ನೆಲೆಯಲ್ಲಿ ನವಜೋತ್ ಸಿಂಗ್ ಸಿಧು ಅವರು ನ್ಯಾಯಾಲಯದ ಮುಂದೆ ಶರಣಾಗಬೇಕಾಗಿದೆ.