-->
ಬೆಳ್ತಂಗಡಿ: ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ: ಅಕ್ಕಿ ಸಹಿತ ಪಿಕ್ಅಪ್ ಚಾಲಕ ವಶಕ್ಕೆ

ಬೆಳ್ತಂಗಡಿ: ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ: ಅಕ್ಕಿ ಸಹಿತ ಪಿಕ್ಅಪ್ ಚಾಲಕ ವಶಕ್ಕೆ

ಬೆಳ್ತಂಗಡಿ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಬೆಳ್ತಂಗಡಿಯಿಂದ ಮೂಡಿಗೆರೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿ ಸಹಿತ ಅಕ್ಕಿಯನ್ನು ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಕ್ಕಿ ಸಾಗಾಟ ಮಾಡುತ್ತಿದ್ದ ಚಾಲಕ ಮೂಡಿಗೆರೆ ನಿವಾಸಿ ವನಜಯ್ ಪೊಲೀಸ್ ವಶದಲ್ಲಿರುವ ಆರೋಪಿ. ಪಿಕ್ ಅಪ್ ನಲ್ಲಿದ್ದ 33 ಕ್ವಿಂಟಾಲ್ ಅಕ್ಕಿಯನ್ನು ಹಾಗೂ ಪಿಕ್ಅಪ್ ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ವಶಪಡಿಸಿಕೊಂಡ ಅಕ್ಕಿಯ ಬೆಲೆ 49,500 ರೂ‌. ಎಂದು ಅಂದಾಜಿಸಲಾಗಿದೆ.

ವನಜಯ್ ಅನ್ನಭಾಗ್ಯದ ಅಕ್ಕಿಯನ್ನು ಬೆಳ್ತಂಗಡಿಯಿಂದ ಮೂಡಿಗೆರೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಪಿಕ್ಅಪ್ ನಿಲ್ಲಿಸಿ ತಪಾಸಣೆ ನಡೆಸಿದಾಗ ವಾಹನದಲ್ಲಿದ್ದ ಅಕ್ಕಿ ಅನ್ನಭಾಗ್ಯದ ಅಕ್ಕಿಯೆಂದು ಅನುಮಾನ ಬಂದಿದೆ. ಈ ವ
ಬಗ್ಗೆ ವಿಚಾರಣೆ ನಡೆಸಿದಾಗ ಚಾಲಕನೂ ಅದನ್ನು ಒಪ್ಪಿದ್ದಾನೆ‌. ತಕ್ಷಣ ಸ್ಥಳಕ್ಕೆ ಆಹಾರ ಇಲಾಖೆಯ ಅಧಿಕಾರಿಗಳನ್ನು ಕರೆಸಲಾಗಿದೆ. ಅವರು ಪರಿಶೀಲನೆ ನಡೆಸಿ ಮೇ ತಿಂಗಳ ಅನ್ನಭಾಗ್ಯದ ಅಕ್ಕಿಯನ್ನು ಹೋಲುವುದಾಗಿ ಹೇಳಿದ್ದಾರೆ. ತಕ್ಷಣ ಅಕ್ಕಿ ಹಾಗೂ ಪಿಕ್ಅಪ್ ಚಾಲಕನನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ತೆಗೆದುಕೊಂಡು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

Ads on article

Advertise in articles 1

advertising articles 2

Advertise under the article