
ಮಂಗಳೂರು: ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ ಅರೆಸ್ಟ್
5/06/2022 09:18:00 PM
ಮಂಗಳೂರು: ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು ಮಂಗಳೂರು ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ.
ಮಹಮ್ಮದ್ ಸಮೀರ್ ಅಲಿಯಾಸ್ ಕಡಪ್ಪರ ಸಮೀರ್ ಬಂಧಿತ ಆರೋಪಿ.
ನಗರದ ತಲಪಾಡಿಯಲ್ಲಿ ಕ್ಯಾಂಟೀನ್ ಮಾಲಿಕನ ಮೇಲೆ ನಡೆದ ಹಲ್ಲೆ ಪ್ರಕರಣ, ಫೆಬ್ರವರಿಯಲ್ಲಿ ಸೋಮೇಶ್ವರ ನಿವಾಸಿಯೊಬ್ಬನ ಕೊಲೆ ಯತ್ನ ಪ್ರಕರಣ ಸೇರಿದಂತೆ ಹಲವು ಅಪರಾಧಗಳಲ್ಲಿ ಸಮೀರ್ ಭಾಗಿಯಾಗಿದ್ದ ಎನ್ನಲಾಗಿದೆ.
ಕಡಪ್ಪುರ ಶಮೀರ್ ವಿರುದ್ಧ ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಪಿಸಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಾಗಿವೆ. ಇದೀಗ ಪೊಲೀಸರು ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.