Career in Karnataka Bank- ಕರ್ಣಾಟಕ ಬ್ಯಾಂಕ್ ಕ್ಲರ್ಕ್ ನೇಮಕಾತಿ- ಪದವೀಧರರಿಗೆ ಅವಕಾಶ

ಕರ್ಣಾಟಕ ಬ್ಯಾಂಕ್ ಕ್ಲರ್ಕ್ ನೇಮಕಾತಿ- ಪದವೀಧರರಿಗೆ ಅವಕಾಶ






ಖಾಸಗಿ ಬ್ಯಾಂಕ್ ಗಳಲ್ಲಿ ಮುಂಚೂಣಿ ಬ್ಯಾಂಕಾಗಿ ಗುರುತಿಸಿಕೊಂಡಿರುವ ಕರ್ಣಾಟಕ ಬ್ಯಾಂಕ್ ತನ್ನ ದೇಶಾದ್ಯಂತ ವಿವಿಧ ಕಚೇರಿಗಳಲ್ಲಿ ಕೆಲಸ ಮಾಡಲು ಕ್ಲರ್ಕ್ ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.



ಶೇಕಡ 60 ಅಂಕಗಳೊಂದಿಗೆ ತೇರ್ಗಡೆ ಹೊಂದಿರುವ ಯಾವುದೇ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈಗಷ್ಟೇ ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.



ವಯೋಮಿತಿ: ಗರಿಷ್ಟ 26 ವರ್ಷ. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ

ಅರ್ಜಿ ಶುಲ್ಕ: 700/-.



ಅಭ್ಯರ್ಥಿಗಳಿಗೆ ಜೂನ್ 2022 ರಲ್ಲಿ ಲಿಖಿತ ಪರೀಕ್ಷೆ ನಡೆಸಲಿದ್ದು, ಬೆಂಗಳೂರು ಧಾರವಾಡ ಹುಬ್ಬಳ್ಳಿ ಮಂಗಳೂರು ಮುಂಬೈ ಮೈಸೂರು ನವದೆಹಲಿ ಮತ್ತು ಶಿವಮೊಗ್ಗ ಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಯೋಜಿಸಲಾಗಿದೆ.


ಕರ್ನಾಟಕ ಬ್ಯಾಂಕಿನ ಅಧಿಕೃತ ವೆಬ್ ಸೈಟ್ ನಲ್ಲಿ ಅಧಿಸೂಚನೆಯನ್ನು ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.



ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 21-05-2022


ಅರ್ಜಿಗಳನ್ನು ಕೇವಲ ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸಬೇಕು. ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.