ಅನ್ಯಕೋಮಿನ ಯುವತಿಯ ಪ್ರೀತಿಸುತ್ತಿದ್ದ ಯುವಕನನ್ನು ಹತ್ಯೆಗೈದ ದುಷ್ಕರ್ಮಿಗಳು

ಕಲಬುರಗಿ: ಅನ್ಯಕೋಮಿನ ಯುವತಿಯ ಪ್ರೀತಿಯ ಬಲೆಗೆ ಬಿದ್ದಿದ್ದ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. 

ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಹತ್ಯೆಯಾದ ದುರ್ದೈವಿ. 

ವಿಜಯ ಕಾಂಬಳೆ ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ. ಇದೇ ಕಾರಣಕ್ಕೆ ಯುವತಿಯ ಕುಟುಂಬಿಕರೇ ಆತನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ವಾಡಿ ಪಟ್ಟಣದಲ್ಲಿದ್ದ ವಿಜಯನೊಂದಿಗೆ ದುಷ್ಕರ್ಮಿಗಳು ಅಲ್ಲಿನ ರೈಲ್ವೆ ತಡೆಗೋಡೆಯ ಬಳಿ ತಡೆದಿದ್ದಾರೆ. ಬಳಿಕ ಆತನನ್ನು ಮಾರಕಾಸ್ತ್ರ, ಕಲ್ಲು, ಕಟ್ಟಿಗೆಯಿಂದ ಹೊಡೆದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಅಸುನೀಗಿದ್ದಾನೆ. ಮೃತಪಟ್ಟ ಯುವಕನ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ ವಾಡಿ ಪೊಲೀಸರು ಹಂತಕರ ಶೋಧ ಕಾರ್ಯ ಆರಂಭಿಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ