-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಹಿಳೆ ಮೇಲೆ ಭಜರಂಗದಳ ಕಾರ್ಯಕರ್ತರ ಹಲ್ಲೆ: ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ

ಮಹಿಳೆ ಮೇಲೆ ಭಜರಂಗದಳ ಕಾರ್ಯಕರ್ತರ ಹಲ್ಲೆ: ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ

ಮಹಿಳೆ ಮೇಲೆ ಭಜರಂಗದಳ ಕಾರ್ಯಕರ್ತರ ಹಲ್ಲೆ: ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ


ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಸಾಕು ಕರು ತೆಗೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಭಜರಂಗದಳ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.






ಈ ಕುರಿತು ಟ್ವೀಟ್ ಮಾಡಿರುವ ಅವರು ಬಜರಂಗ ದಳದ ಕಾರ್ಯಕರ್ತರು ಮಹಿಳೆ ಮೇಲೆ ಹಲ್ಲೆ ಮಾಡಿ, ಕಿರುಕುಳ ನೀಡಿರುವ ವರದಿಗಳನ್ನು ಕೇಳಿ ಅತೀವ ಬೇಸರವಾಗಿದೆ. ಬಜರಂಗದಳದ ಕಾರ್ಯಕರ್ತರು ರಣಹದ್ದುಗಳ ರೀತಿ ವರ್ತಿಸುತ್ತಿದ್ದಾರೆ. ಸುದ್ದಿಯಲ್ಲಿ ಬರಲು ಅಮಾಯಕ ಜನರ ಮೇಲೆ ದಾಳಿ ಮಾಡುತ್ತಿದ್ದಾರೆ. ಎಂದು ಆರೋಪಿಸಿದ್ದಾರೆ.



ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವ್ಯವಸ್ಥಿತವಾಗಿಲ್ಲ. ಇದು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಗೃಹ ಸಚಿವ ಅರಗ ಜ್ಞಾನೇಂದ್ರ ತಕ್ಷಣ ರಾಜೀನಾಮೆ ನೀಡಬೇಕು. ಬಿಜೆಪಿ ನಕಲಿ ಚೌಕಿದಾರರಿಂದ ತುಂಬಿದೆ ಮತ್ತು ಕರ್ನಾಟಕವು ಯುಪಿಯಂತಾಗುವುದನ್ನು ತಪ್ಪಿಸಲು ಬದಲಾವಣೆಯ ಅಗತ್ಯವಿದೆ ಎಂದು ಅವರು ಟ್ವೀಟ್ ಮೂಲಕ ಅಭಿಪ್ರಾಯಪಟ್ಟಿದ್ದಾರೆ.



ಹಿಂದೂ ರಕ್ಷಕರು ಎಂದು ಬಜರಂಗದಳ ಕಾರ್ಯಕರ್ತರು ಹೇಳಿಕೊಳ್ಳುತ್ತಾರೆ. ಅವರ ಯಾವ ಧರ್ಮ ಗ್ರಂಥಗಳು ಮಂಗಳಸೂತ್ರ ಮತ್ತು ಸೀರೆ ಎಳೆಯಲು ಹೇಳುತ್ತವೆ? ಅಥವಾ ಅವರ ಪೂರ್ವಜರು ಕಲಿಸಿದ ಪಾಠವೇ? ಭಜರಂಗದಳಕ್ಕೆ ಸೇರಿದ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂಬುದಾಗಿ ವರದಿಯಾಗಿದೆ. ಕರ್ನಾಟಕದ ಪೊಲೀಸರು ಜನಸಾಮಾನ್ಯರಿಗಾಗಿ ಕೆಲಸ ಮಾಡುತ್ತಿದೆಯೇ ಅಥವಾ ಬಿಜೆಪಿ ಮತ್ತದರ ಮಿತ್ರಪಕ್ಷಗಳ ಗೂಂಡಾಗಳಿಗಾಗಿ ಕೆಲಸ ಮಾಡುತ್ತಿದ್ದಾರಾ? ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ