ವಿಟ್ಲ: ನೇಣಿಗೆ ಶರಣಾದ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ: ಕಾರಣ ನಿಗೂಢ

ವಿಟ್ಲ: ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.

ಸುಳ್ಯ ತಾಲೂಕು ಪಂಜ ಮೂಲದ ಪ್ರಸ್ತುತ ಕನ್ಯಾನ, ಕಣಿಯೂರು ನಿವಾಸಿ ಸಂಜೀವ ಅವರ ಪುತ್ರಿ ಆತ್ಮಿಕಾ(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಆತ್ಮಿಕಾ ತನ್ನ ಕುಟುಂಬದವರೊಂದಿಗೆ ಕನ್ಯಾನ ಗ್ರಾಮದ ಕಣಿಯೂರಿನ ದಿ. ಸುಲೈಮಾನ್ ಹಾಜಿಯವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಆದರೆ ಆಕೆ ಮನೆಮಂದಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಬಾಡಿಗೆ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಆತ್ಮಹತ್ಯೆಗೆ ಕಾರಣ ಮಾತ್ರ ನಿಗೂಢವಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.