-->
ಮಂಗಳೂರು ಏರ್ಪೋರ್ಟ್ ನಲ್ಲಿ ಒಳ ಉಡುಪಿನಲ್ಲಿ ಬಿಚ್ಚಿಟ್ಟು 18.85 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ!

ಮಂಗಳೂರು ಏರ್ಪೋರ್ಟ್ ನಲ್ಲಿ ಒಳ ಉಡುಪಿನಲ್ಲಿ ಬಿಚ್ಚಿಟ್ಟು 18.85 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ!

ಮಂಗಳೂರು: ಮಂಗಳೂರು ಏರ್ಪೋರ್ಟ್ ನಲ್ಲಿ ಒಳ ಉಡುಪಿನೊಳಗೆ ಬಿಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 18.95 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ.

ಭಟ್ಕಳ ಮೂಲದ ಪ್ರಯಾಣಿಕ ಸ್ಪೈಸ್ ಜೆಟ್ ನಲ್ಲಿ ಜೂ.22ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ವೇಳೆ ಆ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಆಗ ಈತ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ತಿಳಿದು ಬಂದಿದೆ.

ಈ ಪ್ರಯಾಣಿಕ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಪೇಪರ್ ಹಾಗೂ ಪ್ಲಾಸ್ಟಿಕ್ ನೊಳಗಿಟ್ಟು ಒಳ ಉಡುಪಿನಲ್ಲಿ ಸ್ಟಿಚ್ ಮಾಡಿರುವ ಕಳ್ಳ ಕಿಸೆಯೊಳಗೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಮಾಲು ಸಮೇತ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಪ್ರಯಾಣಿಕನಿಂದ 364.500 ಗ್ರಾಂ ತೂಕದ 18,95,400 ರೂ. ಮೊತ್ತದ 24 ಕ್ಯಾರೆಟ್ ಶುದ್ಧ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article