
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 32.72 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ
6/04/2022 08:36:00 PM
ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 32.72 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ತೆಗೆದುಕೊಂಡಿದ್ದಾರೆ.
ದುಬೈನಿಂದ ಏರ್ ಇಂಡಿಯಾ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾಸರಗೋಡು ಮೂಲದ ಪ್ರಯಾಣಿಕ ಆಗಮಿಸಿದ್ದಾನೆ. ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಆಗ ಅನುಮಾನ ಬಂದು ಮತ್ತಷ್ಟು ಪರಿಶೀಲನೆ ನಡೆಸಿದ ವೇಳೆ ಈತ ಬಾಕ್ಸ್ ನೊಳಗೆ ಚಿನ್ನವನ್ನು ಪೌಡರ್ ರೂಪದಲ್ಲಿ ಬಿಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ತಕ್ಷಣ ಈ ಚಿನ್ನ ಸಹಿತ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. 24ಕ್ಯಾರೆಟ್ ನ 624 ಗ್ರಾಂ ತೂಕದ 32,72,880 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.