-->
ಅಯೋಧ್ಯೆ: ಸರಯೂ ನದಿಯಲ್ಲಿ ಪತ್ನಿಗೆ ಮುತ್ತಿಟ್ಟ ಪತಿಗೆ ಗುಂಪಿನಿಂದ ಹಲ್ಲೆ!

ಅಯೋಧ್ಯೆ: ಸರಯೂ ನದಿಯಲ್ಲಿ ಪತ್ನಿಗೆ ಮುತ್ತಿಟ್ಟ ಪತಿಗೆ ಗುಂಪಿನಿಂದ ಹಲ್ಲೆ!

ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸರಯೂ ನದಿಯ ದಂಡೆಯ ಘಾಟ್‌ಗಳ ಸರಣಿ ರಾಮ್ ಕಿ ಪೈಡಿಯಲ್ಲಿ ಸ್ನಾನ ಮಾಡುತ್ತಿದ್ದ ಸಂದರ್ಭ ಸಾರ್ವಜನಿಕವಾಗಿಯೇ ಪತ್ನಿಗೆ ಮುತ್ತಿಟ್ಟ ಪತಿಗೆ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿದೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 

ತಮ್ಮ ಸುತ್ತಮುತ್ತ ಜನರಿದ್ದ ಘಾಟ್​ನಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಪತಿ ತನ್ನ ಪತ್ನಿಯನ್ನು ಚುಂಬಿಸಿದ್ದಾನೆ. ಇದನ್ನು ನೋಡಿದಾತ ಆತನನ್ನು ಎಳೆದು ಹೊಡೆಯಲು ಆರಂಭಿಸುತ್ತಾನೆ. ಈ ವೇಳೆ ಅಲ್ಲಿದ್ದ ಜನರೆಲ್ಲಾ ಪತಿಯ ಮೇಲೆ ಹಲ್ಲೆ ಮಾಡಲಾರಂಭಿಸುತ್ತಾರೆ. ತನ್ನ ಪತಿಯ ಮೇಲೆ ಹಲ್ಲೆ ಮಾಡದಂತೆ ಪತ್ನಿ ತಡೆಯಲು ಯತ್ನಿಸುತ್ತಾಳೆ.


ಬಳಿಕ ಇಬ್ಬರನ್ನು ನೀರಿನಿಂದ ಹೊರಗೆಳೆದು ಮಹಿಳೆಯ ಪತಿಯನ್ನು ಸುತ್ತುವರಿದು ಹಲ್ಲೆ ಮಾಡುತ್ತಾರೆ. ಇದಿಷ್ಟು ವೀಡಿಯೋದಲ್ಲಿ ದಾಖಲಾಗಿದೆ. ಅಯೋಧ್ಯೆಯಲ್ಲಿ ಈ ಅಸಭ್ಯತೆಯನ್ನು ಸಹಿಸಲಾಗುವುದಿಲ್ಲ ಎಂದು ಕೋಪಗೊಂಡ ಗುಂಪಿನ ಯುವಕ ಹೇಳಿರುವುದು ವಿಡಿಯೋದಲ್ಲಿದೆ. ಈ ವಿಡಿಯೋವನ್ನು ಅಶೋಕ್​ ಸ್ವೈನ್​ ಎಂಬುವರು ಶೇರ್​ ಮಾಡಿದ್ದಾರೆ. ಈ ವ್ಯಕ್ತಿ ತನ್ನ ಹೆಂಡತಿಗೆ ಮುತ್ತು ನೀಡಿ ತಪ್ಪು ಮಾಡಿಬಿಟ್ಟ. ಅಯೋಧ್ಯೆಯಲ್ಲಿರುವ ರಾಮಭಕ್ತರು ಹಲ್ಲೆಗೊಳಗಾದ ವ್ಯಕ್ತಿಯ ಪತ್ನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ವ್ಯಕ್ತಿಯನ್ನು ಥಳಿಸಿದ್ದಾರೆ, ಮುತ್ತಿಡುವುದು ಭಾರತೀಯ ಸಂಸ್ಕೃತಿಯಲ್ಲವಂತೆ. ಆದರೆ, ಗುಂಪು ಹಲ್ಲೆ ಸಂಸ್ಕೃತಿಯಲ್ಲಿ ಒಂದಂತೆ ಎಂದು ಅಶೋಕ್​ ಸ್ವೈನ್​ ಎಂಬುವರು ಟೀಕಿಸಿದ್ದಾರೆ.

ಸದ್ಯ ಈ ವೀಡಿಯೋ ವೈರಲ್​ ಆಗಿದ್ದು, ಈಗಾಗಲೇ 1 ಮಿಲಿಯನ್​ಗೂ ಅಧಿಕ ಮಂದಿ ವೀಡಿಯೋವನ್ನು ವೀಕ್ಷಿಸಿದ್ದಾರೆ. ವೀಡಿಯೋಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಈ ಘಟನೆಯ ಬಗ್ಗೆ ಮಾತನಾಡಿರುವ ಅಯೋಧ್ಯೆಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಶೈಲೇಶ್ ಪಾಂಡೆ, 'ಈ ವೀಡಿಯೋ ಒಂದು ವಾರ ಹಳೆಯದಾಗಿದೆ. ನಮಗೆ ಈ ವಿಚಾರದಲ್ಲಿ ಯಾವುದೇ ದೂರುಗಳು ಬಂದಿಲ್ಲ. ಈಗ ದಂಪತಿಗಳು ಎಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಕ್ರಮ ತೆಗೆದುಕೊಳ್ಳಲು ಬಯಸಿದರೆ ಅವರು ದೂರು ದಾಖಲಿಸಬಹುದು ಎಂದು ಹೇಳಿದ್ದಾರೆ. 

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article