ಚಿತ್ರದುರ್ಗ: ಬಾಲಕಿಯನ್ನು ಬೆದರಿಸಿ ಮದುವೆಯಾದವನೇ ಸ್ನೇಹಿತರೊಂದಿಗೆ ಸೇರಿ ಗ್ಯಾಂಗ್ ರೇಪ್ ಮಾಡಿದ!
Sunday, June 26, 2022
ಚಿತ್ರದುರ್ಗ: ಬೆದರಿಸಿ ಮದುವೆಯಾದವನು ಸೇರಿದಂತೆ ನಾಲ್ವರು ಕಾಮುಕರು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಕುರಿತು ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರ್ಷದ ಹಿಂದೆ ಬಾಲಕಿಯನ್ನು ಬೆದರಿಸಿ ಬಲವಂತವಾಗಿ ಮದುವೆಯಾಗಿದ್ದ ಯುವಕ ಸೇರಿದಂತೆ ಆತನ ಮೂವರು ಸ್ನೇಹಿತರು ಈ ಕೃತ್ಯ ಎಸಗಿದ್ದಾರೆ. ಜೂನ್ 7ರಂದು ನಗರದ ಹೊರವಲಯಕ್ಕೆ ಬಾಲಕಿಯನ್ನು ಕರೆದೊಯ್ದ ಕಾಮುಕರು ಸಾಮೂಹಿಕವಾಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಅಲ್ಲದೆ ಕೃತ್ಯದ ಬಗ್ಗೆ ದೂರು ನೀಡದಂತೆ ಬಾಲಕಿಗೆ ಕೊಲೆ ಬೆದರಿಕೆಯನ್ನೊಡ್ಡಿದ್ದಾರೆ. ಅಲ್ಲದೆ ಈ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆದಿತ್ತು ಎಂದು ದೂರಿನಲ್ಲಿ ಹೇಳಲಾಗಿದೆ.
ವರ್ಷದ ಹಿಂದೆ ತನ್ನನು ಬೆದರಿಸಿ ಮದುವೆಯಾಗಿದ್ದ ವ್ಯಕ್ತಿ, ಮದುವೆಯ ಬಳಿಕ ಶೀಲವನ್ನು ಶಂಕಿಸಿ ಆಗಾಗ ಜಗಳ ತೆಗೆಯುತ್ತಿದ್ದ. ಜೂ.7 ರಂದು ಸ್ನೇಹಿತರೊಂದಿಗೆ ಸೇರಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಬಾಲಕಿ ಆರೋಪಿಸಿದ್ದಾಳೆ.
ಈ ಕುರಿತು ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.