kadaba:-ಶಾಲೆಯೊಂದರಲ್ಲಿ ಹಲವು ಮಕ್ಕಳಿಗೆ ಚಿಕನ್ ಫಾಕ್ಸ್..ಶಾಲೆಗೆ ಒಂದು ವಾರ ರಜೆ.

ಕಡಬ

ಕಡಬದ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ರೋಗ ಹರಡಿರುವುದರಿಂದ ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು ಭೇಟಿ ನೀಡಿದ್ದು, ಶಾಲೆಗೆ ಒಂದು ವಾರಗಳ ಕಾಲ ರಜೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಕೆಲ ದಿನಗಳ ಹಿಂದೆ ಕೆಲವು ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದ್ದ ಈ ರೋಗವು ಇದೀಗ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹರಡಿದೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್.ಬಿ, ಕಡಬ ಖಾಸಗಿ ವಿದ್ಯಾಸಂಸ್ಥೆಯ ಸುಮಾರು 40 ರಷ್ಟು ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ತಗುಲಿರುವ ಮಾಹಿತಿಯನ್ನು ತಾಲೂಕು ಆರೋಗ್ಯಾಧಿಕಾರಿಗಳಿಂದ ಪಡೆದುಕೊಂಡಿದ್ದೇನೆ. ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ಹಾಗೂ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಧ್ಯತೆ ಇರೋದರಿಂದ ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಶಾಲೆಗೆ ರಜೆ ನೀಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu