-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
kadaba :- ಕರ್ತವ್ಯ ಲೋಪ ಆರೋಪ ಸಾಬೀತು.. ಶೀರಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು.

kadaba :- ಕರ್ತವ್ಯ ಲೋಪ ಆರೋಪ ಸಾಬೀತು.. ಶೀರಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು.

ಶೀರಾಡಿ

ಶೀರಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟೇಶ್   ಅವರನ್ನು ಗ್ರಾಮ ಪಂಚಾಯಿತಿ ಲೆಕ್ಕ ಪತ್ರಗಳ ನಿರ್ವಹಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು, ಶಿಷ್ಟಾಚಾರ ಪಾಲಿಸದಿರುವುದು ಮತ್ತು ಕರ್ತವ್ಯಲೋಪ ಎಸಗಿರುವ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ವೆಂಕಟೇಶ್ ನಡೆಸಿರುವ ಅವ್ಯವಹಾರಗಳ ಬಗ್ಗೆ ಗ್ರಾಮಸ್ಥರು ಸೇರಿ ಹಲವರಿಂದ ಹಲವಾರು ದೂರುಗಳು ಸಲ್ಲಿಕೆಯಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ಪ್ರತ್ಯೇಕ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತನಿಖಾ ತಂಡವು ದೂರು ಅರ್ಜಿಗಳಲ್ಲಿನ ಅಂಶಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ತನಿಖಾ ವರದಿಯನ್ನು ಸಲ್ಲಿಸಿದ್ದು, ಸದರಿ ತನಿಖಾ ವರದಿಯಲ್ಲಿ ಪಿ.ಡಿ.ಒ ವೆಂಕಟೇಶ್  ಕರ್ತವ್ಯಲೋಪ ಎಸಗಿರುವುದು ಕಂಡು ಬಂದಿದೆ.  ಹಲವು ಆರೋಪಗಳು ಪಿ.ಡಿ.ಒ ವೆಂಕಟೇಶ್ ಮೇಲೆ ಸಾಬೀತು ಆಗಿದೆ.ಈ ಹಿನ್ನಲೆಯಲ್ಲಿ ಆರೋಪಗಳ ಕುರಿತು ವಿವರವಾದ ವಿಚಾರಣೆ ನಡೆಸುವ ಸಲುವಾಗಿ ಇದೀಗ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ , ಇವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ