-->
ಮಂಗಳೂರು: ಎಂಡಿಎಂಎ ಮಾದಕ ವಸ್ತು‌ ಸಾಗಾಟ ಮಾಡುತ್ತಿದ್ದ ಮಹಿಳೆ ಸೇರಿದಂತೆ ನಾಲ್ಕು ಮಂದಿ ಅಂದರ್

ಮಂಗಳೂರು: ಎಂಡಿಎಂಎ ಮಾದಕ ವಸ್ತು‌ ಸಾಗಾಟ ಮಾಡುತ್ತಿದ್ದ ಮಹಿಳೆ ಸೇರಿದಂತೆ ನಾಲ್ಕು ಮಂದಿ ಅಂದರ್

ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಯನ್ನು ಬೆಂಗಳೂರಿನಿಂದ ಸಾಗಾಟ ಮಾಡುತ್ತಿದ್ದ ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. 

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಮಹಮ್ಮದ್ ರಮೀಝ್(24), ಶಿರಿಯಾ, ಕುನ್ನಿಲ್ ಶಿರಿಯಾ ನಿವಾಸಿ ಮೊಹಿದ್ದೀನ್ ರಾಶೀದ್(24), ಉಪ್ಪಳದ ಮುಳಿಂಜ ನಿವಾಸಿ ಅಬ್ದುಲ್ ರವೂಫ್(35) ಹಾಗೂ ಬೆಂಗಳೂರಿನ ಮಡಿವಾಳ‌ ನಿವಾಸಿ ಸಬಿತಾ ಅಲಿಯಾಸ್ ಚಿಂಚು ಅಲಿಯಾಸ್ ಸಮೀರಾ(25) ಬಂಧಿತ ಆರೋಪಿಗಳು.


ಆರೋಪಿಗಳು ಎಂಡಿಎಂಎ ಮಂಗಳ ದೂರು ವಸ್ತುವನ್ನು ಬೆಂಗಳೂರಿನಿಂದ ಅಕ್ರಮವಾಗಿ ಖರೀದಿ ಮಾಡಿ ಮಂಗಳೂರಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ನಗರದ ಪಡೀಲ್ ಬಳಿ ದಾಳಿ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ ಎಂಡಿಎಂಎ ನಿಷೇಧಿತ ಮಾದಕ ವಸ್ತು ಪತ್ತೆಯಾಗಿದೆ. ಬಂಧಿತರಿಂದ ಒಟ್ಟು 125 ಗ್ರಾಂ ತೂಕದ 6 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ 6 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪಕ ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ರಿಡ್ಜ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 9,82,000 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. 

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Ads on article

Advertise in articles 1

advertising articles 2

Advertise under the article