-->
ಮಂಗಳೂರು: ಹಿಜಾಬ್ ವಿವಾದದ ವಿದ್ಯಾರ್ಥಿನಿಯರಿಗೆ ವಿವಿ ಕಾಲೇಜಿನಿಂದ ಶಿಸ್ತು ಕ್ರಮದ ನೋಟಿಸ್ ಜಾರಿ‌

ಮಂಗಳೂರು: ಹಿಜಾಬ್ ವಿವಾದದ ವಿದ್ಯಾರ್ಥಿನಿಯರಿಗೆ ವಿವಿ ಕಾಲೇಜಿನಿಂದ ಶಿಸ್ತು ಕ್ರಮದ ನೋಟಿಸ್ ಜಾರಿ‌

ಮಂಗಳೂರು: ನಗರದ ಮಂಗಳೂರು ವಿವಿ ಕಾಲೇಜಿನ ಹಿಜಾಬ್ ವಿವಾದದ ವಿದ್ಯಾರ್ಥಿನಿಯರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ನೋಟಿಸ್ ಜಾರಿಗೊಳಿಸಿದೆ. ಈ ವಿದ್ಯಾರ್ಥಿನಿಯರಿಗೆ ನೋಟಿಸ್ ಗೆ ಮೂರು ದಿನಗಳೊಳಗೆ ಉತ್ತರಿಸುವಂತೆ ಕಾಲೇಜು ಪ್ರಾಂಶುಪಾಲೆ ಡಾ.ಅನಸೂಯ ರೈ ನೋಟಿಸ್ ಜಾರಿ ಮಾಡಿದ್ದಾರೆ.

ಮಂಗಳೂರು ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವಂತಿಲ್ಲ ಎಂಬ ಆದೇಶವಿದೆ. ಈ ಬಗ್ಗೆ ಮಂಗಳೂರು ವಿವಿಯಿಂದ ಮಾರ್ಗಸೂಚಿ ಹಾಗೂ ಹೈಕೋರ್ಟ್ ನ ಆದೇಶವನ್ನು ಎಲ್ಲಾ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಲಾಗಿದೆ. ಕಾಲೇಜಿನಲ್ಲಿ ಸುಮಾರು 1,600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕೇವಲ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು  ತರಗತಿಗೆ ಹಾಜರಾಗದೆ ಕಾಲೇಜು ಆವರಣದಲ್ಲಿ ಆತಂಕ, ಶಾಂತಿಭಂಗ ಮತ್ತು ಅಶಿಸ್ತು ಸೃಷ್ಟಿ ಮಾಡುತ್ತಿರುವುದು ಕಂಡುಬಂದಿರುತ್ತದೆ. 

ಅಲ್ಲದೆ ನೀವು ಬಾಹ್ಯಶಕ್ತಿಗಳೊಂದಿಗೆ ಸೇರಿ ಸುದ್ದಿಗೋಷ್ಠಿ ನಡೆಸಿ ಕಾಲೇಜು ಹಾಗೂ ಪ್ರಾಂಶುಪಾಲರ ವಿರುದ್ಧ ಹೇಳಿಕೆಯನ್ನು ನೀಡಿದ್ದಾರೆ. ಈ ಮೂಲಕ ಕಾಲೇಜಿನ ಘನತೆಗೆ ಧಕ್ಕೆ ಉಂಟು ಮಾಡಿರುವುದನ್ನು ಗಮನಿಸಲಾಗಿದೆ. ಈ ರೀತಿಯ ವರ್ತನೆಯ ಬಗ್ಗೆ ನಿಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬ ಬಗ್ಗೆ ಸಮಜಾಯಿಷಿಯನ್ನು ಈ ಪತ್ರ ತಲುಪಿದ ಮೂರು ದಿನಗಳೊಳಗೆ ಪ್ರಾಂಶುಪಾಲರಿಗೆ ನೀಡುವಂತೆ ಸೂಚಿಸಲಾಗಿದೆ ಎಂದು ನೋಟಿಸ್ ನೀಡಲಾಗಿದೆ.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article