-->

PUC FAIL : ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ

PUC FAIL : ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ


ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ‌. ಹಲವಾರು ಮಂದಿ ಪಾಸ್‌ ಆಗಿರುವ ಖುಷಿಯಲ್ಲಿ ತೇಲುತ್ತಿದ್ದಾರೆ‌. ಆದರೆ ಪರೀಕ್ಷೆಯಲ್ಲಿ ಫೇಲ್ ಆಗಿರುವುದರಿಂದ ಮನನೊಂದು ಮೂವರು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡರೆ, ಮತ್ತೋರ್ವಳು ರಿಸಲ್ಟ್ ಬರುವ ಮುನ್ನವೇ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ಸಂಧ್ಯಾ


ಮಡಿಕೇರಿಯ ಕುಶಾಲನಗರ ನಿವಾಸಿ ಸಂಧ್ಯಾ ಕುಶಾಲನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆ ಬರೆದಿದ್ದ ಆಕೆ ಫಲಿತಾಂಶದ ನಿರೀಕ್ಷೆಯಲ್ಲಿದ್ದಳು. ಆದರೆ ರಿಸಲ್ಟ್ ಏನಾಗುತ್ತೋ ಎಂಬ ಆತಂಕದಲ್ಲಿ  ಫಲಿತಾಂಶ ಬರುವ ಮುನ್ನವೇ ನೇಣಿಗೆ ಶರಣಾಗಿದ್ದಾಳೆ. ಆದರೆ ವಿಪರ್ಯಾಸವೆಂದರೆ 67 ಶೇಕಡಾ ಅಂಕ ಗಳಿಸಿದ್ದಾಳೆ.


ಪವಿತ್ರಾ ಪ್ರಭುಗೌಡ ಲಿಂಗಧಾಳ(18)


ಗದಗ ಜಿಲ್ಲೆಯ ಹರ್ತಿ ಗ್ರಾಮದ ವಿದ್ಯಾರ್ಥಿನಿ ಪವಿತ್ರಾ ಪ್ರಭುಗೌಡ ಲಿಂಗಧಾಳ ತನ್ನ ರಿಸಲ್ಟ್ ನೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ನಗರದ ಸನ್ಮಾರ್ಗ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆ ಕನ್ನಡ, ಇಂಗ್ಲೀಷ್ ಭಾಷಾ ವಿಷಯಗಳನ್ನು ಹೊರತುಪಡಿಸಿ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯದಲ್ಲಿ ಅನುತ್ತೀರ್ಣಳಾಗಿದ್ದಳು. ಇದರಿಂದ ಮನನೊಂದ ವಿದ್ಯಾರ್ಥಿನಿ ಲಿಂಗಧಾಳ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇದನ್ನು ಪೋಷಕರು ಗಮನಿಸಿ ಆಕೆಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ದಾರಿ ಮಧ್ಯೆಯೇ ಆಕೆ ಮೃತಪಟ್ಟಿದ್ದಾಳೆ.

ಎಂ.ಜೆ.ಸ್ಪoದನಾ(17) 



ಮಂಡ್ಯದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಎಂ.ಜೆ.ಸ್ಪoದನಾ ಪಿಯುಸಿಯಲ್ಲಿ ಫೇಲ್ ಆಗಿರೋದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಮತ್ತೋರ್ವ ವಿದ್ಯಾರ್ಥಿನಿ. ಈಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದಳು. ಬಳಿಕ ಮಂಡ್ಯ ಖಾಸಗಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಆದರೆ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದರೆ ತಾನು ಮೂರು ವಿಷಯಗಳಲ್ಲಿ ಅನುತ್ತೀರ್ಣರಾಗಿವುದನ್ನು ಗಮನಿಸಿದ ಆಕೆ ಮನನೊಂದು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.


ಪೂಜಾ ರಾಚಪ್ಪ ಚಳಗೇರಿ-ಬಳಿಗಾರ


ಬಾಗಲಕೋಟೆ ಜಿಲ್ಲೆಯ ಬಿಳಗಿ ತಾಲೂಕಿನ ಯಡಹಳ್ಳಿಯ  ವಿದ್ಯಾರ್ಥಿನಿ ಪೂಜಾ ರಾಚಪ್ಪ 
 ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಶನಿವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಾಗ ತಾನು ಫೇಲ್ ಆಗಿರುವುದು ಆಕೆಗೆ ತಿಳಿದು ಬಂದಿದೆ. ಪರಿಣಾಮ ಆಕೆ ಮನನೊಂದು ಯಡಹಳ್ಳಿ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article