ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

Puttur:-ಸಾಂಬಾರು ಪಾತ್ರೆಗೆ ಆಕಸ್ಮಿವಾಗಿ ಕಾಲು ಜಾರಿ ಬಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

ಪುತ್ತೂರು,

ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ  ಸಂದರ್ಭ ಸಾಂಬಾರು ಪಾತ್ರೆಗೆ ಆಕಸ್ಮಿವಾಗಿ ಕಾಲು ಜಾರಿ ಬಿದ್ದ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಪುತ್ತೂರು ತಾಲೂಕು ಕುರಿಯ ಗ್ರಾಮ ಮಲಾರು ಮನೆ ನಿವಾಸಿ ಜಾರ್ಜ್ ಪ್ರಸನ್ನ ಡಿ’ಸೋಜ ಅವರ ಪತ್ನಿ  ಅಗ್ನೆಸ್ ಪ್ರಮೀಳಾ ಡಿಸೋಜಾ (37)  ಮೃತಪಟ್ಟವರು. ಪ್ರಮೀಳಾ ಡಿಸೋಜಾ ರವರು  ಮೇ.30 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ  ಸೈಂಟ್ ವಿಕ್ಟರ್ ಶಾಲೆಯ ಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವೇಳೆ, ಶಾಲೆಯ ಅಡುಗೆ ಮನೆಯ ಬಾಗಿಲ ಬಳಿ ತಯಾರು ಮಾಡಿಟ್ಟಿದ್ದ ಸಾಂಬಾರಿನ ಪಾತ್ರೆಗೆ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ