ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ - ಕಾಲೇಜುಗಳಿಗೆ ನಾಳೆ ರಜೆ ಘೋಷಣೆ


ಮಂಗಳೂರು: ಇಂದು ಸುರಿದ ಮಳೆಗೆ ದ.ಕ.ಜಿಲ್ಲೆಯಾದ್ಯಂತ ಭಾರೀ ಅವಾಂತರ ಸೃಷ್ಟಿಯಾಗಿದ್ದು,‌ ಈ ಹಿನ್ನೆಲೆಯಲ್ಲಿ ನಾಳೆ ಎಲ್ಲಾ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಾಳೆ ಬೆಳಗ್ಗೆ 8.30 ವರೆಗೆ ಆರೆಂಜ್ ಅಲರ್ಟ್ ಇದೆ. ಅಲ್ಲದೆ ನಿನ್ನೆ ರಾತ್ರಿಯಿಂದಲೇ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ ಎಲ್ಲೆಡೆ ನೀರು ನುಗ್ಗಿದೆ. ಪರಿಣಾಮ ಭಾರೀ ಅವಾಂತರ ಸೃಷ್ಟಿಯಾಗಿದೆ. ಪರಿಣಾಮ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶುಕ್ರವಾರ ಜಿಲ್ಲೆಯ ಎಲ್ಲಾ ಶಾಲಾ - ಕಾಲೇಜುಗಳಿಗೆ ರಜೆ ನೀಡಲು‌ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಿದೆ.