-->
Subrahmanya :- ಕುಕ್ಕೆ ಸುಬ್ರಮಣ್ಯದಲ್ಲಿ ನಡೆದ ದನ ಕಳ್ಳತನ ಯತ್ನ. ಆರೋಪಿ ಪೋಲೀಸರ ಬಲೆಗೆ,ನ್ಯಾಯಾಂಗ ಬಂಧನ..

Subrahmanya :- ಕುಕ್ಕೆ ಸುಬ್ರಮಣ್ಯದಲ್ಲಿ ನಡೆದ ದನ ಕಳ್ಳತನ ಯತ್ನ. ಆರೋಪಿ ಪೋಲೀಸರ ಬಲೆಗೆ,ನ್ಯಾಯಾಂಗ ಬಂಧನ..

ಸುಬ್ರಮಣ್ಯ 

ಕುಕ್ಕೆ ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ ಈ ವರ್ಷ ಮಾರ್ಚ್ 23ರಂದು ನಡೆದ ದನವನ್ನು ಕದಿಯುವ ಪ್ರಯತ್ನಕ್ಕೆ ಸಂಭಂಧಿಸಿದಂತೆ ಆರೋಪಿಯೊಬ್ಬನನ್ನು ಸುಬ್ರಮಣ್ಯ ಪೊಲೀಸರು ಬಂಧಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿ ಕಾರಿನಲ್ಲಿ ಬಂದ ಅಪರಿಚಿತರು ದನವನ್ನು ಕದಿಯಲು ಪ್ರಯತ್ನ ಮಾಡಿದ್ದರು.ಇದಕ್ಕೆ ಸಂಬಂಧಪಟ್ಟಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್ ಫಾರೂಕ್ ಎಂಬಾತನನ್ನು ಸುಬ್ರಹ್ಮಣ್ಯ ಪೋಲೀಸರು ದಸ್ತಗಿರಿ ಮಾಡಿದ್ದಾರೆ.ಈತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ಮಾನ್ಯ ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಲಾಗಿದೆ ಎಂದು ತಿಳಿದು ಬಂದಿದೆ.

Ads on article

Advertise in articles 1

advertising articles 2

Advertise under the article