-->

Subrahmanya :- ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ರಾಜ್ಯಪಾಲರ ಭೇಟಿ.

Subrahmanya :- ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ರಾಜ್ಯಪಾಲರ ಭೇಟಿ.

ಸುಬ್ರಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಾನ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಇಂದು ಭೇಟಿ ನೀಡಿ ಪೂಜಾ ಸಂಕಲ್ಪ ಮಾಡಿದರು.

ಅವರಿಗೆ ಆಶ್ಲೇಷ ವಸತಿ ಗೃಹದ ಎದುರು ಸರಕಾರಿ ನಿಯಮದನ್ವಯ ಗೌರವವಂದನೆ ಸಲ್ಲಿಸಲಾಯಿತು. ರಾಜ್ಯಪಾಲರು ಇಂದು ಪೂಜಾ ಸಂಕಲ್ಪ ಮಾಡಿದ್ದು, ನಾಳೆ ವಿಶೇಷ ಪೂಜೆ ನಡೆಯಲಿದೆ. ಸಚಿವ ಎಸ್. ಅಂಗಾರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ,ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಆಯುಕ್ತ ಹೃಷಿಕೇಶ್ ಸೋನಾವಾಣೆ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ದ.ಕ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ಕುಮಾರ್,ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ,ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರು , ಮತ್ತಿತರರು ಉಪಸ್ಥಿತರಿದ್ದು ಸ್ವಾಗತವನ್ನು ಕೋರಿದರು.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

Advertise under the article

  

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100