-->
ಮಂಗಳೂರಿನಲ್ಲಿ ಯೋಗ ದಿನಾಚರಣೆ: ಆಳ್ವಾಸ್‍ನಲ್ಲಿ ಬೃಹತ್ ಯೋಗ ಪ್ರಾತ್ಯಕ್ಷಿಕೆ

ಮಂಗಳೂರಿನಲ್ಲಿ ಯೋಗ ದಿನಾಚರಣೆ: ಆಳ್ವಾಸ್‍ನಲ್ಲಿ ಬೃಹತ್ ಯೋಗ ಪ್ರಾತ್ಯಕ್ಷಿಕೆ

ಮಂಗಳೂರಿನಲ್ಲಿ ಯೋಗ ದಿನಾಚರಣೆ: ಆಳ್ವಾಸ್‍ನಲ್ಲಿ ಬೃಹತ್ ಯೋಗ ಪ್ರಾತ್ಯಕ್ಷಿಕೆ

ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಜೂನ್ 21 ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ಸುಮಾರು 2,600ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಬೆಳಿಗ್ಗೆ 6:30 ರಿಂದ 7:30 ರವರೆಗೆ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಯೋಗ ಪ್ರಾತ್ಯಕ್ಷಿಕೆಯನ್ನು ನೀಡಲಿದ್ದಾರೆ.


ಮೂಡಬಿದಿರೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಈ ವಿಷಯ ತಿಳಿಸಿದ್ದಾರೆ.ಈ ಬಗ್ಗೆ ಭರದ ತಯಾರಿ ನಡೆದಿದ್ದು, ಕಳೆದ ಒಂದು ವಾರದಿಂದ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ವಿದ್ಯಾ ಸಂಸ್ಥೆಗಳ ಜೊತೆಗೆ ಮೂಡುಬಿದಿರೆ ಮತ್ತು ಮಂಗಳೂರು ವಲಯದ ಅನೇಕ ಶಾಲಾ ಕಾಲೇಜು ಮತ್ತು ಸುತ್ತಲಿನ ಸಾರ್ವಜನಿಕರಿಗೆ 35ಕ್ಕೂ ಹೆಚ್ಚು ಕೇಂದ್ರಗಳಲ್ಲಿ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಯೋಗ ತರಬೇತಿ ನೀಡುತ್ತಿದ್ದಾರೆ.


ರಾಜ್ಯದ ಹಾಗೂ ಹೊರ ರಾಜ್ಯದ ಸಂಘ ಸಂಸ್ಥೆಗಳಿಗೂ ನೇರ ಹಾಗೂ ಅಂತರ್ಜಾಲ ಮೂಲಕ ತರಬೇತಿ ನೀಡಲಾಗುತ್ತಿದೆ. ಜೂನ್ 21ರ ಒಳಗೆ ಸುಮಾರು 8ರಿಂದ 10 ಸಾವಿರ ಮಂದಿ ಯೋಗ ತರಬೇತಿ ಪಡೆದುಕೊಳ್ಳಲಿದ್ದಾರೆ.ಜೂನ್ 21 ರಂದು ನಡೆಯುವ ಯೋಗ ಪ್ರಾತ್ಯಕ್ಷಿಕೆಯು ಶಿಕ್ಷಣ ಪ್ರತಿಷ್ಟಾನದ ಯೂಟ್ಯೂಬ್ ಹಾಗೂ ಫೇಸ್ ಬುಕ್, ಇನ್‍ಸ್ಟಾಗ್ರಾಂಗಳಲ್ಲಿ ನೇರಪ್ರಸಾರವಾಗಲಿದೆ. ದಕ್ಷಿಣ ಕನ್ನಡದ ಆಯುಷ್ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮ ಜರುಗುತ್ತಿದೆ ಎಂದು ಅವರು ತಿಳಿಸಿದರು.


ಸುಮಾರು 2.5 ವರ್ಷಗಳಿಂದ ಪ್ರತಿದಿನ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪದವಿಪೂರ್ವ ಕಾಲೇಜಿನ ಸುಮಾರು 3,500 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನಿರಂತರವಾಗಿ ಪ್ರಾಣಾಯಾಮ ಮತ್ತು ಧ್ಯಾನದ ತರಬೇತಿ ನೀಡುತ್ತಾ ಬರಲಾಗುತ್ತಿದೆ ಎಂದು ಅವರು ತಿಳಿಸಿದರು.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article