ಮಂಗಳೂರು: ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ಎಸಗಿರುವ ತಂದೆಗೆ 20 ವರ್ಷ ಕಠಿಣ ಶಿಕ್ಷೆ, ದಂಡ

ಮಂಗಳೂರು: ಅಪ್ರಾಪ್ತ ಪುತ್ರಿಯ ಮೇಲೆ ಹೆತ್ತ ತಂದೆಯೇ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿರುವ ಆರೋಪ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ವಿಧಿಸಲಾಗಿದೆ.

ವಿಟ್ಲ ಪೆರುವಾಯಿ ಗ್ರಾಮದ ಅಬ್ದುಲ್ ಅಝೀಝ್ ( 70 ) ಶಿಕ್ಷೆಗೊಳಗಾದ ಅಪರಾಧಿ‌.

2020ರ ಮಾರ್ಚ್‌ ತಿಂಗಳಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಬ್ದುಲ್ ಅಝೀಝ್ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ತನಿಖೆ ನಡೆಸಿ , ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಬಳಿಕ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ಸಾಕ್ಷ್ಯಾಧಾರಗಳು ಹಾಗೂ ಕೂಲಂಕಷ ತನಿಖೆಯನ್ನು ಆಧರಿಸಿ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ಸರಕಾರದ ಪರವಾಗಿ ವಾದಿಸಿದ್ದರು .
BREAKING NEWS
Loading latest news...
Join our WhatsApp Channel Powered By : Online Pudu