ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ: ಶಂಕಿತ 21ಮಂದಿ ಪೊಲೀಸ್ ವಶಕ್ಕೆ

ಸುರತ್ಕಲ್: ನಗರದ ಸುರತ್ಕಲ್ ಜಂಕ್ಷನ್ ನ ವಸ್ತ್ರಮಳಿಗೆ ಮುಂಭಾಗ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಶಂಕಿತ 21ಮಂದಿಯನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

ಫಾಝಿಲ್ ಹತ್ಯೆ ಜುಲೈ 28ರಂದು ಸಂಜೆ ವೇಳೆ ನಡೆದಿದ್ದು, ಆರೋಪಿಗಳ ಪತ್ತೆಗೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಶಂಕಿತರ ಮೇಲೆ ಹದ್ದಿನ ಕಣ್ಣಿರಿಸಿದ್ದು, ಈಗಾಗಲೇ 21ಮಂದಿಯನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಹತ್ಯೆ ನಡೆದ ಸ್ಥಳದಲ್ಲಿರುವ ಸಿಸಿ ಕ್ಯಾಮರಾ ದೃಶ್ಯಾವಳಿ, ಹಂತಕರು ಹತ್ಯೆ ನಡೆಸಲೆಂದು ದಾಳಿ ಮಾಡಿರುವ ಸಂದರ್ಭ ಬಳಸಿರುವ ಕಾರಿನ ಜಾಡು ಹಿಡಿದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ರನ್ನು ಸುರತ್ಕಲ್ ಜಂಕ್ಷನ್ ನಲ್ಲಿರುವ ವಸ್ತ್ರಮಳಿಗೆಯ ಎದುರು ಹತ್ಯೆ ಮಾಡಲಾಗಿತ್ತು. ದುಷ್ಕರ್ಮಿಗಳು ಕಾರಿನಲ್ಲಿ ಬಂದು ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಗಂಭೀರ ಗಾಯಗಳಿಂದ ರಕ್ತದ ಮಡುವಿನಲ್ಲಿ‌ ಬಿದ್ದಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಫಾಝಿಲ್ ಮೃತಪಟ್ಟಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu