-->
ಅಗಸ್ಟ್ 24ರವರೆಗೆ ಈ ರಾಶಿಯವರ ಪಾಲಿಗೆ ಅದೃಷ್ಟ ಕರುಣಿಸಲಿದ್ದಾನೆ ಶುಕ್ರ..!!

ಅಗಸ್ಟ್ 24ರವರೆಗೆ ಈ ರಾಶಿಯವರ ಪಾಲಿಗೆ ಅದೃಷ್ಟ ಕರುಣಿಸಲಿದ್ದಾನೆ ಶುಕ್ರ..!!
ಮಿಥುನ ರಾಶಿಯಲ್ಲಿ ಶುಕ್ರನ ಸಂಕ್ರಮಣವು 3 ರಾಶಿಯವರಿಗೆ ತುಂಬಾ ಮಂಗಳಕರವಾಗಿರುತ್ತದೆ. ಈ ಸಮಯದಲ್ಲಿ ಕೆಲವು ರಾಶಿಯವರಿಗೆ ಅದೃಷ್ಟ ತರಲಿದ್ದಾನೆ. 


ಸಿಂಹ : ಶುಕ್ರನ ಸಂಕ್ರಮಣವು ಸಿಂಹ ರಾಶಿಯವರಿಗೆ ಬಲವಾದ ಆರ್ಥಿಕ ಲಾಭವನ್ನು ನೀಡುತ್ತದೆ. ಹಣ ಗಳಿಸಲು ಈ ರಾಶಿಯವರಿಗೆ ಅನೇಕ ಅವಕಾಶಗಳು ಸಿಗಲಿದೆ. ವೃತ್ತಿಗೆ ಸಂಬಂಧಿಸಿದಂತೆ ಪ್ರಯಾಣ ಯೋಗ ಎದುರಾಗಬಹುದು. ವ್ಯಾಪಾರಿಗಳಿಗೆ ಲಾಭವಾಗಲಿದೆ. 


ತುಲಾ: ತುಲಾ ರಾಶಿಯ ಅಧಿಪತಿ ಶುಕ್ರ. ಜುಲೈ 13 ರಂದು ಮಿಥುನ ರಾಶಿಯಲ್ಲಿ ಶುಕ್ರನ ಪ್ರವೇಶವು ತುಲಾ ರಾಶಿಯವರಿಗೆ ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿಯನ್ನು ನೀಡುತ್ತದೆ. ಹೊಸ ಉದ್ಯೋಗವನ್ನು ಪಡೆಯುವ ಬಲವಾದ ಅವಕಾಶಗಳಿವೆ. ಆದಾಯದಲ್ಲಿ ದೊಡ್ಡ ಮಟ್ಟದ ಹೆಚ್ಚಳವಾಗಬಹುದು. ಆಧ್ಯಾತ್ಮದ ಕಡೆಗೆ ಒಲವು ಹೆಚ್ಚಾಗುವುದು. ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಬಹುದು. 


ಕುಂಭ: ಶುಕ್ರನ ರಾಶಿಯ ಬದಲಾವಣೆಯು ಕುಂಭ ರಾಶಿಯವರಿಗೆ ಧನ ಲಾಭದ ಜೊತೆಗೆ ಬಹಳಷ್ಟು ಸಂತೋಷವನ್ನು ನೀಡುತ್ತದೆ. ಆದಾಯ ಹೆಚ್ಚಲಿದೆ. ಹೂಡಿಕೆಯಿಂದ ಲಾಭವನ್ನು ಪಡೆಯಬಹುದು. ವ್ಯಾಪಾರ ವೃದ್ಧಿಯಾಗಲಿದೆ. ನಿರೀಕ್ಷೆಗಿಂತ ಹೆಚ್ಚಿನ ಲಾಭ ಸಿಗಲಿದೆ. ಸೃಜನಶೀಲತೆ ಉತ್ತುಂಗದಲ್ಲಿರುತ್ತದೆ. ಒಟ್ಟಿನಲ್ಲಿ ಈ ಬಾರಿ ವರದಾನದಂತೆ ಇರಲಿದೆ.  

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

Advertise under the article

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100