-->
ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್, ಅನುಚಿತ ವರ್ತನೆ ಪ್ರಕರಣ; ಮತ್ತೋರ್ವ ವಿದ್ಯಾರ್ಥಿ ವಶಕ್ಕೆ

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್, ಅನುಚಿತ ವರ್ತನೆ ಪ್ರಕರಣ; ಮತ್ತೋರ್ವ ವಿದ್ಯಾರ್ಥಿ ವಶಕ್ಕೆ

ಮಂಗಳೂರು: ನಗರದ ಕಾಲೇಜೊಂದರ ವಿದ್ಯಾರ್ಥಿಗಳ ಕಿಸ್ಸಿಂಗ್ ಹಾಗೂ ಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಈವರೆಗೆ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದರು. ನಿನ್ನೆ ಮತ್ತೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸುದಂತಾಗಿದೆ.

ಮಂಗಳೂರಿನ ಬಾವುಟಗುಡ್ಡದ ಕಾಲೇಜೊಂದರ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರನ್ನು ತಾವು ವಾಸವಿದ್ದ ರೂಂಗೆ ಕರೆಸಿಕೊಂಡು ಟ್ರುತ್ ಅಂಡ್​​ ಡೇರ್ ಗೇಮ್ ಆಡಿ ವಿದ್ಯಾರ್ಥಿನಿಯರ ಜೊತೆಗೆ ಕಿಸ್ಸಿಂಗ್ ಮಾಡಿ ಅನುಚಿತವಾಗಿ ವರ್ತಿಸಿದ್ದರು. ಇದರ ವಿಡಿಯೋ ಮೊನ್ನೆ ವೈರಲ್ ಆಗಿತ್ತು. ಈ ಬಗ್ಗೆ ಮಂಗಳೂರು ನಗರ ಪೊಲೀಸರು ಮೂರು ಪ್ರತ್ಯೇಕ ಪೋಕ್ಸೋ ಪ್ರಕರಣ ದಾಖಲಿಸಿದ್ದರು.

ಪ್ರಕರಣದಲ್ಲಿ ಈಗಾಗಲೇ 8ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇದೀಗ ಈ ಸಂಬಂಧ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಅವರನ್ನು ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಬಾಲ ನ್ಯಾಯಾಲಯವು ವಿದ್ಯಾರ್ಥಿಗಳನ್ನು ಹೆತ್ತವರ ಕಸ್ಟಡಿಗೆ ನೀಡಿದ್ದು, ಅಗತ್ಯ ಬಿದ್ದಾಗ ತನಿಖಾಧಿಕಾರಿ ಮುಂದೆ ಹಾಜರಾಗಲು ಸೂಚಿಸಿದೆ.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article