ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರಕ್ಕೆತ್ನಿಸಿದ ಆರೋಪಿ ಮೇಲೆ ಪೊಕ್ಸೊ ಪ್ರಕರಣ ದಾಖಲು

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಕಾಮುಕನೋರ್ವನ ಮೇಲೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ. 

ನಗರದ ಕಾವೂರಿನಲ್ಲಿ ತರಕಾರಿ ವ್ಯಾಪಾರಿಯಾಗಿದ್ದ 
ಈ ಅಪ್ರಾಪ್ತ ಬಾಲಕಿಯು ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಈ ಬಾಲಕಿ ಆರೋಪಿ ಮುಸ್ತಫಾನ ಅಂಗಡಿಗೆ ತರಕಾರಿ ಕೊಳ್ಳಲು ಹೋಗುತ್ತಿದ್ದ ವೇಳೆ ಆತ ತನ್ನ ಮೊಬೈಲ್ ನಂಬರ್ ನೀಡಿ ಫೋನ್ ಮಾಡುವಂತೆ ಪೀಡಿಸುತ್ತಿದ್ದ. ಆದರೆ ಆಕೆ ಫೋನ್ ಮಾಡುತ್ತಿರಲಿಲ್ಲ. ಆದರೆ ಯಾವುದೋ ಕಾರ್ಯಕ್ಕೆ ಆರೋಪಿಯ ಮೊಬೈಲ್ ಗೆ ತುರ್ತು ಕರೆ ಮಾಡಿದ್ದ ವೇಳೆ ಆತ ಆಕೆಯ ತಾಯಿಯ ಮೊಬೈಲ್ ನಂಬರ್ ಅನ್ನು ಸೇವ್ ಮಾಡಿ ಕರೆ ಮಾಡಿ ಅಶ್ಲೀಲವಾಗಿ ಮಾತನಾಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಲ್ಲದೆ ಜು.8ರಂದು ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಗೆ ನುಗ್ಗಿದ ಆರೋಪಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವಿಚಾರವನಯ ಯಾರಿಗಾದರೂ ತಿಳಿಸಿದರೆ ಕೊಲ್ಲುತ್ತೇನೆಂದು ಬೆದರಿಕೆಯೊಡ್ಡಿದ್ದ. ಆದ್ದರಿಂದ ಬೆದರಿದ ಬಾಲಕಿ ಈ ಕೃತ್ಯದ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಆದರೆ ಜು.16ರಂದು ತಾಯಿಗೆ ಈ ವಿಷಯ ತಿಳಿಸಿದ ಬಳಿಕ ದೂರು ನೀಡಲಾಗಿದೆ. ಈ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu