-->

ದ.ಕ. ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾಗಿ ತಿಲೋತ್ತಮ ಆಯ್ಕೆ

ದ.ಕ. ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾಗಿ ತಿಲೋತ್ತಮ ಆಯ್ಕೆ


ಸೌತ್ ಕೆನರಾ ಗವರ್ಮೆಂಟ್ ಆಫೀಸರ್ಸ್ ಕೋಪರೇಟಿವ್ ಬ್ಯಾಂಕ್ ನ ಉಪಾಧ್ಯಕ್ಷರಾಗಿ ತಿಲೋತ್ತಮ ಆಯ್ಕೆ

ಕರ್ನಾಟಕ ರಾಜ್ಯದ ವೇತನದಾರರ ಸಹಕಾರಿ ಬ್ಯಾಂಕುಗಳಲ್ಲಿ ಅಗ್ರ ಸ್ಥಾನದಲ್ಲಿರುವ ಸೌತ್ ಕೆನರಾ ಗವರ್ಮೆಂಟ್ ಆಫೀಸರ್ಸ್ ಕೋ-ಆಪರೇಟಿವ್ ಬ್ಯಾಂಕ್ ನ ಉಪಾಧ್ಯಕ್ಷರಾಗಿ ಶ್ರೀಮತಿ ತಿಲೋತ್ತಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
100 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿದ ಹಾಗೂ ರಾಷ್ಟ್ರೀಯ ಪುರಸ್ಕಾರದ ಮೂಲಕ ದೇಶದ ಗಮನ ಸೆಳೆದ ಈ ಬ್ಯಾಂಕ್ ನಲ್ಲಿ ಇತ್ತೀಚೆಗೆ ತೆರವಾದ ಉಪಾಧ್ಯಕ್ಷರ ಸ್ಥಾನಕ್ಕೆ ಮಹಿಳಾ ನಿರ್ದೇಶಕಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ತಿಲೋತ್ತಮ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಮಂಗಳೂರು ನಗರದ ಡೊಂಗರಕೇರಿಯ ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬ್ಯಾಂಕ್ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸರಕಾರಿ ನೌಕರರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೇತನ ಸಾಲ, ಚಿನ್ನಾಭರಣಗಳ ಸಾಲ, ಗೃಹ ನಿರ್ಮಾಣ ಸಾಲ ಸೌಲಭ್ಯಗಳನ್ನು ಒದಗಿಸುತ್ತಿದೆ. ಜೊತೆಗೆ ಠೇವಣಿಗಳ ಮೇಲೆ ಆಕರ್ಷಕ ಬಡ್ಡಿ ನೀಡುತ್ತದೆ.ಪ್ರತಿ ವರ್ಷ ಜರುಗುವ ಮಹಾಸಭೆಯಲ್ಲಿ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಮುಂತಾದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ.ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ತಿಲೋತ್ತಮ ಅವರನ್ನು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಪ್ರಕಾಶ್ ನಾಯಕ್, ಸಿ.ಇ.ಒ. ಶ್ರೀ ಲಕ್ಷ್ಮೀಶ್ ಎನ್. ಹಾಗೂ ಬ್ಯಾಂಕ್ ನ ನಿರ್ದೇಶಕರುಗಳ ಅಭಿನಂದಿಸಿದರು.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

Advertise under the article

  

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100