EPFO Recruitment: ಭವಿಷ್ಯ ನಿಧಿ ಇಲಾಖೆಯಲ್ಲಿ ಉದ್ಯೋಗ: ಬಿಇ ಆದವರಿಗೆ ಅವಕಾಶ
EPFO Recruitment: ಭವಿಷ್ಯ ನಿಧಿ ಇಲಾಖೆಯಲ್ಲಿ ಉದ್ಯೋಗ: ಬಿಇ ಆದವರಿಗೆ ಅವಕಾಶ
Employees Provident Fund Organisation- ಉದ್ಯೋಗಿಗಳ ಭವಿಷ್ಯ ನಿಧಿ ಇಲಾಖೆಯಲ್ಲಿ 57 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆಗಳು: ಮುಖ್ಯ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್
ಈ ಮೇಲಿನ ಹುದ್ದೆಗಳಿಗೆ ನೇಮಕಾತಿಗೆ ಇಪಿಎಫ್‌ಒ ಸಂಸ್ಥೆ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 14, 2022
ಡೆಪ್ಯೂಟೆಶನ್ ಆಧಾರದ ಮೇಲೆ ಮೇಲ್ಕಂಡ ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ನೇಮಕಾತಿ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಕುರಿತ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO)
ಹುದ್ದೆಯ ಹೆಸರು: ಮುಖ್ಯ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್
ಒಟ್ಟು ಹುದ್ದೆಗಳ ಸಂಖ್ಯೆ: 57
ಉದ್ಯೋಗ ಸ್ಥಳ: ದೇಶದ ವಿವಿಧೆಡೆ (EPFO ಕಚೇರಿಗಳಲ್ಲಿ)
ವೇತನ: ರೂ. 8700- ರೂ. 39100ರೂ ಮಾಸಿಕ
ವಿದ್ಯಾರ್ಹತೆ:
1) ಮುಖ್ಯ ಎಂಜಿನಿಯರ್: ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ
2) ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್/ಸಿವಿಲ್): ಸಿವಿಲ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ
3) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್/ಸಿವಿಲ್): ಇಪಿಎಫ್‌ಒ ನೇಮಕಾತಿ ನಿಯಮಗಳ ಪ್ರಕಾರ
4) ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್/ಸಿವಿಲ್): ಎಲೆಕ್ಟ್ರಿಕಲ್/ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳು ಮೀರಿರಬಾರದು. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ. .
ಆಯ್ಕೆ ಪ್ರಕ್ರಿಯೆ ಹೇಗೆ..?: ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 30, 2022 (ಆಫ್‌ಲೈನ್‌ನಲ್ಲಿ )
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 14, 2022 (ಆಫ್‌ಲೈನ್‌ನಲ್ಲಿ )
ಈ ಕೆಳಗಿನ ಲಿಂಕ್ ಬಳಸಿ ಅಧಿಸೂಚನೆ ಪಡೆಯಿರಿ. ಅಧಿಕೃತ ವೆಬ್‌ಸೈಟ್: epfindia.gov.in
ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.
ಅರ್ಜಿ ಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ
ಮೋಹಿತ್ ಕುಮಾರ್ ಶೇಖರ್, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು (HRM), ಭವಿಷ್ಯ ನಿಧಿ ಭವನ, 14 ಭಿಕೈಜಿಕರ್ನಾ ಪ್ಲೇಸ್, ನವದೆಹಲಿ - 110066