-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯಕ್ರಮ ಸಹಾಯಕರ ನೇಮಕ: ಅರ್ಜಿ ಆಹ್ವಾನ

ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯಕ್ರಮ ಸಹಾಯಕರ ನೇಮಕ: ಅರ್ಜಿ ಆಹ್ವಾನ

ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯಕ್ರಮ ಸಹಾಯಕರ ನೇಮಕ: ಅರ್ಜಿ ಆಹ್ವಾನ





Karnataka WCD Recruitment 2022: ಕರ್ನಾಟಕ ರಾಜ್ಯ ಸರ್ಕಾರ ಅಧೀನದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕರು ಹುದ್ದೆಗೆ ಪದವೀಧರರಿಂದ ಅರ್ಜಿ ಆಹ್ವಾನಿಸಿದೆ. ವಿವರಗಳು ಈ ಕೆಳಗಿನಂತಿದೆ.


ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತನ್ನ ಇಲಾಖೆಯಲ್ಲಿ ಖಾಲಿ ಇರುವ 'ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕ' ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅಧಿಸುಚನೆ ಹೊರಡಿಸಿದೆ.


ಈ ನೇಮಕ ಹೊರಗುತ್ತಿಗೆ ಆಧಾರದಲ್ಲಿ ಇರುತ್ತದೆ. ಈ ಹುದ್ದೆಯಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಪದವಿ ಪಾಸ್‌ ಮಾಡಿದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.


ಉದ್ಯೋಗ ಇಲಾಖೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆ ಹೆಸರು: ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕರು

ಹುದ್ದೆಗಳ ಸಂಖ್ಯೆ : ಎಷ್ಟು ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ ಎಂದು ತಿಳಿಸಿಲ್ಲ.

ಹುದ್ದೆಯ ಅವಧಿ: ಆರಂಭದಲ್ಲಿ 11 ತಿಂಗಳು ನೇಮಕ ಮಾಡಿಕೊಳ್ಳಲಾಗುತ್ತದೆ. ನಂತರ ಕಾರ್ಯದಕ್ಷತೆ ಆಧಾರದಲ್ಲಿ ಮುಂದುವರಿಸುವ ಅವಕಾಶ ಇರುತ್ತದೆ.


ವಿದ್ಯಾರ್ಹತೆ: ಸಮಾಜ ವಿಜ್ಞಾನ / ಸಮಾಜ ಕಾರ್ಯ / ಗ್ರಾಮೀಣ ನಿರ್ವಹಣೆ / ಸಂಖ್ಯಾಶಾಸ್ತ್ರ ಇವುಗಳಲ್ಲಿ ಯಾವುದಾದರೊಂದು ಪದವಿ ಪಡೆದಿರಬೇಕು.


ಸೇವಾ ಅನುಭವ:

- ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

- ಡೇಟಾ ಎಂಟ್ರಿ, MS Office ಬಳಕೆ ಗೊತ್ತಿರಬೇಕು.

- ಸ್ಥಳೀಯ ಭಾಷೆ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸಂವಹನ ಮಾಡಲು ಸಮರ್ಥರಿರಬೇಕು.

ಗೌರವಧನ ರೂ. 25,000 ಪ್ರತಿ ತಿಂಗಳು


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕೃತ ವೆಬ್‌ಸೈಟ್‌: https://wcd.karnataka.gov.in/


ಅರ್ಜಿ ಸಲ್ಲಿಕೆ ಹೇಗೆ?: ತಮ್ಮ ಸ್ವ ವಿವರ ಇರುವ ಅರ್ಜಿಗಳನ್ನು ಸೂಕ್ತ ದಾಖಲೆಗಳ ಸಹಿತ ಈ ಕೆಳಗೆ ನೀಡಿದ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನ : 15-07-2022



ಅರ್ಜಿ ಸಲ್ಲಿಸಬೇಕಾದ ವಿಳಾಸ:

ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 2ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ || ಬಿ ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001.

Ads on article

Advertise in articles 1

advertising articles 2

Advertise under the article

ಸುರ