ಪ್ರಜಾವಾಣಿ ಪತ್ರಿಕೆಯಲ್ಲಿ ಉಪ ಸಂಪಾದಕ/ವರದಿಗಾರ ಹುದ್ದೆಗೆ ಬೇಕಾಗಿದ್ದಾರೆ
ಪ್ರಜಾವಾಣಿ ಪತ್ರಿಕೆಯಲ್ಲಿ ಉಪ ಸಂಪಾದಕ/ವರದಿಗಾರ ಹುದ್ದೆಗೆ ಬೇಕಾಗಿದ್ದಾರೆ
ರಾಜ್ಯದ ಮುಂಚೂಣಿ ದಿನಪತ್ರಿಕೆ ಪ್ರಜಾವಾಣಿ ಬಳಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಈ ಕೆಳಗಿನ ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಯ ವಿವರ: ಉಪಸಂಪಾದಕ/ ವರದಿಗಾರ
ಅಭ್ಯರ್ಥಿಗಳು ಪತ್ರಿಕೋದ್ಯಮ ಮತ್ತು ಬರವಣಿಗೆಯಲ್ಲಿ ಆಸಕ್ತಿ ಹೊಂದಿರಬೇಕು.
ಪ್ರಚಲಿತ ವಿಷಯ, ರಾಜಕೀಯ ವಿಷಯಗಳಲ್ಲಿ ಹೆಚ್ಚಿನ ಜ್ಞಾನ ಹೊಂದಿರಬೇಕು.
ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಆಸಕ್ತಿ ಇರಬೇಕು.
ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡುವ ಸಾಮರ್ಥ್ಯ ಹೊಂದಿರಬೇಕು.
ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಾನ: ಗರಿಷ್ಟ 30 ವರ್ಷ ವಯಸ್ಸು
ಅನುಭವ: 2ರಿಂದ 5 ವರ್ಷ ಅನುಭವ ಇದ್ದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಜುಲೈ 13 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ದೇಶದ ಯಾವುದೇ ಸ್ಥಳದಲ್ಲೂ ಕೆಲಸ ಮಾಡಲು ಸಿದ್ಧರಿರಬೇಕು.
ಹೆಸರು, ವಿಳಾಸ, ವಿದ್ಯಾರ್ಹತೆ, ಅನುಭವ ಹಾಗೂ ಸಂಬಂಧಿತ ಮಾಹಿತಿ ಕುರಿತ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.
ಮ್ಯಾನೇಜರ್(ನೇಮಕಾತಿ)
ದಿ ಪ್ರಿಂಟರ್ಸ್ ಮೈಸೂರು ಪ್ರೈ. ಲಿ.
ನಂ. 75, ಮಹಾತ್ಮಾ ಗಾಂಧಿ ರಸ್ತೆ, ಬೆಂಗಳೂರು - 560 001
ಇಮೇಲ್ ವಿಳಾಸ : careers@prajavani.co.in