
Kaaniyooru:-ಕಾರು ನದಿಗೆ ಪಲ್ಟಿಯಾಗಿ ನಾಪತ್ತೆಯಾದವರ ಮೃತದೇಹಗಳು ಪತ್ತೆ..
7/12/2022 09:41:00 AM
ಕಾಣಿಯೂರು
ಬೈತಡ್ಕದಲ್ಲಿ ಸೇತುವೆಗೆ ಡಿಕ್ಕಿ ಹೊಡೆದು ಕಾರು ಹೊಳೆಗೆ ಉರುಳಿಬಿದ್ದ ಪ್ರಕರಣಕ್ಕೆ ಸಂಭಂಧಿಸಿದಂತೆ ನಾಪತ್ತೆಯಾದವರಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದೆ.
ಕಾರು ಬಿದ್ದ ಜಾಗದಿಂದ ಕೆಳಗಡೆ ಸುಮಾರು 250ಮೀ ದೂರದಲ್ಲಿ ಎರಡು ಮೃತದೇಹಗಳು ಪತ್ತೆಯಾಗಿದೆ. ಸ್ಥಳೀಯರು ಮೊದಲು ಒಂದು ಮೃತದೇಹ ನೋಡಿದ್ದು, ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೈತಡ್ಕ ಸೇತುವೆಯಿಂದ 250 ಮೀಟರ್ ದೂರದ ಮರಕ್ಕಡ ಜೇಡರಕೇರಿ ಮಂಜಯ್ಯ ಆಚಾರ್ಯ ಎಂಬವರ ಮನೆಯ ಬಳಿ ಹೊಳೆಯಲ್ಲಿ ಮೃತದೇಹ ಒಂದು ಮೃತದೇಹ ಪತ್ತೆಯಾಗಿತ್ತು. ನಂತರದಲ್ಲಿ ಸ್ವಲ್ಪ ಕೆಳಗಡೆ ಎರಡನೇ ಮೃತದೇಹ ಪತ್ತೆಯಾಗಿದೆ.