-->
ಮಂಗಳೂರು: ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ 'ಕಿಸ್ಸಿಂಗ್' ವೀಡಿಯೋ ವೈರಲ್

ಮಂಗಳೂರು: ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ 'ಕಿಸ್ಸಿಂಗ್' ವೀಡಿಯೋ ವೈರಲ್

ಮಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಕಿಸ್ಸಿಂಗ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸದ್ಯ ಮಂಗಳೂರು ಪೊಲೀಸರು ಈ ದೃಶ್ಯವನ್ನು ವೀಡಿಯೋ ಚಿತ್ರೀಕರಿಸಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಇಲ್ಲಿ ಎಲ್ಲರ ಮುಂಭಾಗವೇ ಲಿಪ್ ಲಾಕ್ ಮಾಡಬೇಕೆಂಬ ಪಂದ್ಯಾಟವನ್ನು ವಿದ್ಯಾರ್ಥಿಗಳು ಮಾಡಿದ್ದಾರೆ. ವಿದ್ಯಾರ್ಥಿಗಳ ಹುಚ್ಚಾಟದ ಈ ದೃಶ್ಯವನ್ನು ಜೊತೆಗಿದ್ದ ವಿದ್ಯಾರ್ಥಿ ವೀಡಿಯೋ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ.

ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್‌ನಲ್ಲಿ ತೊಡಗಿದ್ದರು ಎನ್ನಲಾಗಿದೆ. ವಿದ್ಯಾರ್ಥಿನಿಯರು ಕಾಲೇಜು ಯೂನಿಫಾರಂನಲ್ಲಿದ್ದು, ವಿದ್ಯಾರ್ಥಿಗಳು ಯೂನಿಫಾರಂ‌ ಧರಿಸಿಲ್ಲ. ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್ ನಲ್ಲಿ ತೊಡಗಿದ್ದಾರೆ. ಇದು ವಿದ್ಯಾರ್ಥಿಗಳು ವಾಸಿಸುವ ಕೊಠಡಿಯಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಅಲ್ಲಿಗೆ ಈ ವಿದ್ಯಾರ್ಥಿಯರು ತೆರಳಿರಬಹುದು. ಆಗ ಇವರು ಲಿಪ್ ಲಾಕ್ ಮಾಡಿರಬಹುದು ಎನ್ನಲಾಗಿದೆ.  

ವಿದ್ಯಾರ್ಥಿಗಳ ತಂಡದ ಮಧ್ಯೆಯಿದ್ದ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಲಿಪ್ ಲಾಕ್ ಮಾಡಿರುವ ವೀಡಿಯೋ ವೈರಲ್ ಆಗಿದೆ. ಇದೀಗ ಈ ವೀಡಿಯೋ ಮಾಡಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನ ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಕಾನೂನು ತಜ್ಞರ ಸಲಹೆ ಪಡೆದ ಕ್ರಮಕ್ಕೆ ‌ಮುಂದಾಗಿದ್ದಾರೆ.

ಈ ವೀಡಿಯೋದಲ್ಲಿ ಮೂವರು ಯುವಕರು ಹಾಗೂ ಮೂವರು ವಿದ್ಯಾರ್ಥಿನಿಯರಿದ್ದಾರೆ. ಮೂವರು ವಿದ್ಯಾರ್ಥಿನಿಯರು ಕಾಲೇಜು ಯೂನಿಫಾರಂ, ಐಡಿ ಕಾರ್ಡ್ ಸಹಿತ ಇದ್ದರೆ, ಉಳಿದ ಮೂವರು ಯುವಕರು ಯೂನಿಫಾರಂನಲ್ಲಿಲ್ಲ. ಸದ್ಯ ಪೊಲೀಸರು ವಿದ್ಯಾರ್ಥಿನಿಯರು ‌ಹಾಗೂ ಆ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿದ್ದು, ಶೀಘ್ರವೇ ಅವರೆಲ್ಲರನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಮಾದಕವಸ್ತು ಸೇವನೆಯ ಬಗ್ಗೆಯೂ ಪೊಲೀಸರು ತನಿಖೆ ನಡೆಸುವ ಸಾಧ್ಯತೆಯೂ ಇದೆ. 


Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article