-->
ಬೆಂಗಳೂರಿನಲ್ಲಿ ಸುಟ್ಟುಕರಕಲಾಗಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣ: ಪತಿಯೇ ಹಂತಕ!

ಬೆಂಗಳೂರಿನಲ್ಲಿ ಸುಟ್ಟುಕರಕಲಾಗಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣ: ಪತಿಯೇ ಹಂತಕ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರ ಸುಟ್ಟು ಕರಕಲಾದ ಮೃತದೇಹವೊಂದು ದೊರಕಿತ್ತು. ಆದರೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಆರೋಪಿಯ ಸುಳಿವು ದೊರಕದೆ ತಲೆನೋವಾಗಿ ಪರಿಣಮಿಸಿತ್ತು. ಇದೀಗ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿದ್ದು ಮಾತ್ರವಲ್ಲ, ಮೃತ ಮಹಿಳೆಯ ಪತಿಯೇ ಆರೋಪಿ ಎಂದು ತನಿಖೆಯಿಂದ ಬಹಿರಂಗಗೊಂಡಿದೆ.

ಜು.3ರಂದು ಕೆಂಗೇರಿಯ ಠಾಣಾ ವ್ಯಾಪ್ತಿಯ ರಾಮಸಂದ್ರ ಎಂಬಲ್ಲಿ ಮಹಿಳೆಯೋರ್ವರ ಮೃತದೇಹ ಸುಟ್ಟುಕರಕಲಾದ ರೀತಿಯಲ್ಲಿ ಪತ್ತೆಯಾಗಿತ್ತು. ಅಲ್ಲದೆ ದೇಹವು ಪತ್ತೆಹಚ್ಚಲು ಸಾಧ್ಯವಾಗದಷ್ಟು ಕರಕಲಾಗಿತ್ತು. ಈ ಪ್ರಕರಣವನ್ನು ಬೇಧಿಸುವುದು ಪೊಲೀಸರಿಗೆ ಸವಾಲಾಗಿತ್ತು‌. ಆದಾಗ್ಯೂ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ವಿಜಯಪುರ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಉಶಸ್ವಿಯಾಗಿದ್ದಾರೆ.

ಮಹಮ್ಮದ್ ರಫೀಕ್ ಎಂಬಾತನೇ ಬಂಧಿತ ಆರೋಪಿ. ಈತ ಪತ್ನಿ ನಗಿನಾ ಎಂಬಾಕೆಯೇ ಕೊಲೆಯಾದ ಮಹಿಳೆ. ಆರೋಪಿ ಮಹಮ್ಮದ್ ರಫಿಕ್ ಪತ್ನಿಯನ್ನು ಕೊಲೆಗೈದು ಸುಟ್ಟು ಹಾಕಿದ್ದ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಈ ಬಗ್ಗೆ ತನಿಖೆಯಿಂದ ಇನ್ನಷ್ಟು ಮಾಹಿತಿಗಳು ಹೊರ ಬೀಳಲಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

Advertise under the article

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100