ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ: ಇಂದು ಶಾಲೆಗಳಿಗೆ ರಜೆ ಘೋಷಣೆ
Monday, July 4, 2022
ಬೆಳ್ತಂಗಡಿ: ನಿನ್ನೆ ರಾತ್ರಿಯಿಂದಲೇ ಸುರಿತುತ್ತಿರುವ ಮಳೆಯು ಇಂದು ಬೆಳಗ್ಗೆಯೂ ಅತಿಯಾದ ಬಿರುಸು ಪಡೆದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ದೃಷ್ಟಿಯಿಂದ ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ರಾತ್ರಿಯಿಂದಲೇ ನಿರಂತರವಾಗಿ ಮಳೆ ಸುರಿಯುತ್ತಿದೆ. ಬೆಳಗ್ಗೆಯೂ ಮಳೆಯ ಬಿರುಸು ತಗ್ಗದ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆದರೆ ದ.ಕ.ಜಿಲ್ಲೆಯ ಇತರ ತಾಲೂಕುಗಳಲ್ಲಿ ಬೆಳಗ್ಗೆ 5 ಗಂಟೆಯ ಬಳಿಕ ಮಳೆಯ ಬಿರುಸು ತಗ್ಗಿದೆ. ಈ ಹಿನ್ನೆಲೆಯಲ್ಲಿ ಉಳಿದ ತಾಲೂಕುಗಳಲ್ಲಿ ಶಾಲಾ - ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿದ್ದಾರೆ.