-->

ಮಂಗಳೂರು: ಸ್ಪೈಸ್ ಜೆಟ್ ವಿಮಾನ ಹಾರಾಟದಲ್ಲಿ ವ್ಯತ್ಯಯ ಸಾಧ್ಯತೆ!

ಮಂಗಳೂರು: ಸ್ಪೈಸ್ ಜೆಟ್ ವಿಮಾನ ಹಾರಾಟದಲ್ಲಿ ವ್ಯತ್ಯಯ ಸಾಧ್ಯತೆ!

ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಟ್ಟ ಹವಾಮಾನ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲೆ ಸ್ಪೈಸ್ ಜೆಟ್ ವಿಮಾನಗಳ ಹಾರಾಟದಲ್ಲಿ ವ್ಯತ್ಯಾಸಗಳಾಗಬಹುದೆಂದು ಸ್ಪೈಸ್ ಜೆಟ್ ಏರ್ಲೈನ್ ತಿಳಿಸಿದೆ.


ಟ್ವೀಟ್ ಮೂಲಕ ಈ ಬಗ್ಗೆ ಮಾಹಿತಿ ನೀಡಿರುವ ಸ್ಪೈಸ್ ಜೆಟ್ ಏರ್ ಲೈನ್, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಳೆಯ ಹಿನ್ನೆಲೆಯಲ್ಲಿ ಪ್ರತಿಕೂಲ ಹವಾಮಾನ ಉಂಟಾಗುತ್ತಿದೆ. ಪರಿಣಾಮ ಸ್ಪೈಸ್ ಜೆಟ್ ವಿಮಾನಗಳ ಆಗಮನ ಹಾಗೂ ನಿರ್ಗಮನದ ವೇಳಾಪಟ್ಟಿಯಲ್ಲಿ ವ್ಯತ್ಯಾಸವಾಗಬಹುದು. ಆದ್ದರಿಂದ ಪ್ರಯಾಣಿಕರು bit.ly/2tG9xBx ವೆಬ್‌ಸೈಟ್ ಅನ್ನು ಪರಿಶೀಲಿಸುವಂತೆ ಮನವಿ ಮಾಡಿದೆ.

Ads on article

Advertise in articles 1

advertising articles 2

Advertise under the article