
Sullia: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ದುಷ್ಕರ್ಮಿಗಳಿಬ್ಬರು ಪೊಲೀಸ್ ಖೆಡ್ಡಕ್ಕೆ
7/28/2022 12:54:00 AM
ಹತ್ಯೆಯಾದ ಪ್ರವೀಣ್ ನೆಟ್ಟಾರು
ಮಂಗಳೂರು: ರಾಜ್ಯದಲ್ಲಿಯೇ ಭಾರೀ ತಲ್ಲಣಗೊಂಡಿದ್ದ ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದ್ದ ದುಷ್ಕರ್ಮಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ಳಾರೆ ನಿವಾಸಿ ಮಹಮ್ಮದ್ ಶಫೀಕ್ ಹಾಗೂ ಸವಣೂರಿನ ಝಾಕಿರ್ ಬಂಧಿತ ದುಷ್ಕರ್ಮಿಗಳು.
ಬಿಜೆಪಿ ಯುವ ಮೋರ್ಚ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಮೇಲೆ ದುಷ್ಕರ್ಮಿಗಳು ಮೊನ್ನೆ ರಾತ್ರಿ 8ಗಂಟೆ ಸುಮಾರಿಗೆ ನೆಟ್ಟಾರುವಿನಲ್ಲಿರುವ ಅವರ ಕೋಳಿ ಫಾರಂ ಬಳಿಯೇ ಮಾರಕಾಯುಧಗಳಿಂದ ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟಿದ್ದರು. ನಿನ್ನೆ ಅವರ ಅವರ ಮೃತದೇಹದ ಮೆರವಣಿಗೆ ವೇಳೆ ಹಿಂದೂ ಕಾರ್ಯಕರ್ತರಿಂದ ಸರಕಾರ ಹಾಗೂ ಬಿಜೆಪಿ ಮುಖಂಡರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಹಿಂದೂ ಸಂಘಟನೆಗಳು ಈ ಪ್ರಕರಣವನ್ನು ಎನ್ಐಎಗೆ ಒಪ್ಪಿಸುವಂತೆ ಆಗ್ರಹಿಸಿತ್ತು.