-->
Sulya :- ಯುವಕನ ಮೇಲೆ ಹಲ್ಲೆ, ಕೊಲೆಯತ್ನ.ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು.!ಎಲ್ಲಾ 8 ಆರೋಪಿಗಳ ಬಂಧನ..!

Sulya :- ಯುವಕನ ಮೇಲೆ ಹಲ್ಲೆ, ಕೊಲೆಯತ್ನ.ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು.!ಎಲ್ಲಾ 8 ಆರೋಪಿಗಳ ಬಂಧನ..!

ಸುಳ್ಯ 

ಬಾಟಲಿಯಿಂದ ಯುವಕನೊಬ್ಬನ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ.ಈ ಘಟನೆ ಸಂಭಂದ ಎಂಟು ಮಂದಿ ಆರೋಪಿಗಳನ್ನು ಬೆಳ್ಳಾರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ತಾಲೂಕಿನ ಕಳಂಜ ಗ್ರಾಮದ ವಿಷ್ಣು ನಗರ ಎಂಬಲ್ಲಿ ಜು 19 ರಂದು ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು. ಸ್ಥಳೀಯ ನಿವಾಸಿಗಳಾದ ಸುನೀಲ್,ಸುಧೀರ್,ಶಿವ, ಸದಾಶಿವ,ರಂಜೀತ್ ಅಭಿಲಾಷ್, ಜಿಮ್ ರಂಜಿತ್ ಹಾಗೂ ಭಾಸ್ಕರ ಎಂಬವರು ಬಂಧಿತ ಆರೋಪಿಗಳು.

ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ನಿವಾಸಿ ಮಸೂದ್ (18 ವರ್ಷ) ಮೃತ ಯುವಕ.

ಮಂಗಳವಾರ ಸಂಜೆ ಇಲ್ಲಿನ ವಿಷ್ಣು ನಗರದಲ್ಲಿ ಖಾಸಗಿ ಸಮಾರಂಭವೊಂದು ನಡೆದಿದ್ದು ಅದಕ್ಕೆ ಮಸೂದ್ ಬಂದಿದ್ದ.  ಈ ವೇಳೆ ಅಲ್ಲಿ ಸಮೀಪದ ಅಂಗಡಿಯ ಬಳಿ ಆರೋಪಿ ಸುದೀರ್ ನಿಂತಿದ್ದು, ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಮಸೂದ್ ಹಾಗೂ ಆರೋಪಿಯ ಮಧ್ಯೆ  ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಎಂಟು ಜನ ಆರೋಪಿಗಳು  ಒಟ್ಟು ಸೇರಿ ಏಕಾ ಏಕಿ ಮಸೂದನಿಗೆ ಕೈಯಿಂದ ಹಲ್ಲೆ ಮಾಡಲು ಪ್ರಾರಂಭಿಸಿದ್ದಾರೆ ಎನ್ನಲಾಗಿತ್ತು. ಇವರಲ್ಲಿ ಅಭಿಲಾಶ್ ಎಂಬಾತ ಖಾಲಿ ಬಾಟಲಿಯಿಂದ ಮಸೂದನ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ನಂತರದಲ್ಲಿ ಮಸೂದ್ ನ ಗೆಳೆಯರು ಹುಡುಕಾಟ ನಡೆಸುವಾಗ ತಡ ರಾತ್ರಿ 1.30ರ ವೇಳೆ ಅಲ್ಲಿಯೇ ಅಬೂಬಕ್ಕರ್ ಎಂಬವರ ಬಾವಿಯ ಬಳಿ ಮಸೂದನು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಳಿಕ ಆತನನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು , ಅಲ್ಲಿನ ವೈದ್ಯರ ಶಿಫಾರಸ್ಸಿನಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಪಡೀಲ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಆತನಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾನೀಫ್ ಎಂಬಾತ ನೀಡಿದ ದೂರಿನಂತೆ ಎಲ್ಲಾ ಆರೋಪಿಗಳ ವಿರುದ್ದ ಐಪಿಸಿ ಕಲಂ :143, 147, 323, 324, 307 ಜೊತೆಗೆ 149 ರಂತೆ ಪ್ರಕರಣ ದಾಖಲಾಗಿತ್ತು.ಇದೀಗ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ನಿನ್ನೆಯೇ ಮಸೂದ್ ಸ್ಥಿತಿ ಚಿಂತಾಜನಕವಾಗಿತ್ತು.ಇಂದು ಚಿಕಿತ್ಸೆ ಫಲಕಾರಿಯಾಗದೆ ಮಸೂದ್ ಮೃತಪಟ್ಟಿದ್ದಾನೆ.

Ads on article

Advertise in articles 1

advertising articles 2

Advertise under the article