ಜಾರ್ಖಾಂಡ್: ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ, ಐಎಎಸ್ ಅಧಿಕಾರಿ ಅಮಾನತು
Friday, July 8, 2022
ಜಾರ್ಖಾಂಡ್: ಐಐಟಿ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ಸೈಯ್ಯದ್ ಅಹ್ಮದ್ ರನ್ನು ಜಾರ್ಖಾಂಡ್ ಸರಕಾರ ಅಮಾನತು ಮಾಡಿ ಆದೇಶಿಸಿದೆ.
ಸಬ್ ಡಿವಿಷನ್ ಮ್ಯಾಜಿಸ್ಟ್ರೇಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಕಳೆದ ಮಂಗಳವಾರ ಬಂಧಿಸಲಾಗಿತ್ತು. ಸದ್ಯ ಅವರು 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಾರ್ಖಾಂಡ್ ಸರಕಾರ ಅವರನ್ನು ಅಮಾನತು ಮಾಡಿ ಆದೇಶಿಸಿದೆ.
ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಸಂತ್ರಸ್ತ ಯುವತಿ 8ಮಂದಿಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು.