ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಪ್ಪಲಿ ಸೋಲ್ ನೊಳಗಡೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ 17.43 ಲಕ್ಷ ರೂ. ಚಿನ್ನ ವಶಕ್ಕೆ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಪ್ಪಲಿ ಸೋಲ್ ನೊಳಗಡೆ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 17.43 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಆ‌.10ರಂದು ದುಬೈನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಮೂಲದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಆಗ ಈ ಪ್ರಯಾಣಿಕ ಚಪ್ಪಲಿ ಸೋಲ್ ನೊಳಗಡೆ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಬಚ್ಚಿಟ್ಟು ಸಾಗಾಟ ಮಾಡಿರುವುದು ಪತ್ತೆಯಾಗಿದೆ. 

ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನ ಸಹಿತ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಪ್ರಯಾಣಿಕನಿಂದ 332ಗ್ರಾಂ ತೂಕದ 17.43 ಲಕ್ಷ ರೂ. ಶುದ್ಧ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu