ಮಂಗಳೂರು: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿದ್ದ ರಾತ್ರಿ ನಿರ್ಬಂಧವನ್ನು ಆ.8ರಿಂದ ತೆರವುಗೊಳಿಸಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿನ ಶಾಂತಿ, ಸುವ್ಯವಸ್ಥೆಯನ್ನು ಗಮನಿಸಿ ನಾಳೆಯಿಂದ ಅಂಗಡಿ ಮುಂಗಟ್ಟುಗಳು, ಮದ್ಯದಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಬಹುದು. ಎಲ್ಲಾ ರಾತ್ರಿ ನಿರ್ಬಂಧಗಳನ್ನು ತೆರವು ಮಾಡಲಾಗಿದೆ.
ಆದರೆ 144ಸೆಕ್ಷನ್ ಆಗಸ್ಟ್ 14ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿರುತ್ತದೆ. ಆದ್ದರಿಂದ ಐವರಿಗಿಂತ ಅಧಿಕ ಮಂದಿ ಒಂದೆಡೆ ಸೇರುವುದು, ಶಸ್ತ್ರಾಸ್ತ್ರಗಳನ್ನು ಸಾಗಾಟ ಮಾಡುವುದನ್ನು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.