
ಯಾದಗಿರಿ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ದುರ್ಮರಣ
8/04/2022 08:37:00 PM
ಯಾದಗಿರಿ: ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಆರು ಮಂದಿ ಬಲಿಯಾಗಿರುವ ಘಟನೆ ಗುರಮಿಠಕಲ್ ತಾಲೂಕಿನ ಅರಕೇರಾ ಬಳಿ ಗುರುವಾರ ತಡರಾತ್ರಿ ನಡೆದಿದೆ.
ಅಪಘಾತದ ಭೀಕರತೆಗೆ ಸ್ಥಳದಲ್ಲಿಯೇ ಮೂವರು ಪ್ರಾಣ ಬಿಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ 1 ವರ್ಷದ ಹೆಣ್ಣುಮಗು ಸೇರಿದಂತೆ 6 ಮಂದಿ ಕೊನೆಯುಸಿರೆಳೆದಿದ್ದಾರೆ. ಮೃತರ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಬಾಲಕನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ . ಮೃತರೆಲ್ಲರು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮದವರು. ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ. ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ ಪೂಜೆ ಸಲ್ಲಿಸಿ ಹಟ್ಟಿ ಗ್ರಾಮಕ್ಕೆ ಕಾರಿನಲ್ಲಿ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆ ಬೆನ್ನಲ್ಲೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಹಾಗೂ ಪಿಐ ದೌವಲತ್ ಕುರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಗುರುಮಿಠಕಲ್ ಠಾಣಾ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು , ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ