-->
OP - Pixel Banner ad
ದಕ್ಷಿಣ ಕನ್ನಡ ಜಿಲ್ಲಾ ಕೇಟರಿಂಗ್ ಮಾಲೀಕರ ಸಂಘ ಅಧ್ಯಕ್ಷರಾಗಿ ರಾಜಗೋಪಾಲ್ ರೈ

ದಕ್ಷಿಣ ಕನ್ನಡ ಜಿಲ್ಲಾ ಕೇಟರಿಂಗ್ ಮಾಲೀಕರ ಸಂಘ ಅಧ್ಯಕ್ಷರಾಗಿ ರಾಜಗೋಪಾಲ್ ರೈ

ದಕ್ಷಿಣ ಕನ್ನಡ ಜಿಲ್ಲಾ ಕೇಟರಿಂಗ್ ಮಾಲೀಕರ ಸಂಘ ಅಧ್ಯಕ್ಷರಾಗಿ ರಾಜಗೋಪಾಲ್ ರೈ

ದಕ್ಷಿಣ ಕನ್ನಡ ಕೇಟರಿಂಗ್ ಮಾಲೀಕರ ಸಂಘ(ರಿ)ದ ನೂತನ ಅಧ್ಯಕ್ಷರಾಗಿ ರಾಜಗೋಪಾಲ್ ರೈ ಆಯ್ಕೆಯಾಗಿದ್ದಾರೆ. ಸಂಘದ ಕಾರ್ಯದರ್ಶಿಯಾಗಿ ಜೋಸಿ ಸಿಕ್ವೆರಾ, ಕೋಶಾಧಿಕಾರಿಯಾಗಿ ರಾಜೇಶ್ ಶೆಟ್ಟಿ ಶಬರಿ ಅವರನ್ನು ಆಯ್ಕೆ ಮಾಡಲಾಗಿದೆ.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ದಕ್ಷಿಣ ಕನ್ನಡ ಕೇಟರಿಂಗ್ ಮಾಲೀಕರ ಸಂಘ ಕಳೆದ ಹಲವಾರು ವರ್ಷಗಳಿಂದ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಕೊರೋನಾ ಸಂದರ್ಭದಲ್ಲಿ ಬಡವರಿಗೆ ಹಾಗೂ ಹಸಿವಿನಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವ ಮೂಲಕ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ರಾಜಗೋಪಾಲ ರೈ ಅವರ ಅಧ್ಯಕ್ಷತೆಯಲ್ಲಿ ಸಂಘವು ಮುಂದೆಯೂ ಉತ್ತಮ ಕಾರ್ಯ ನಿರ್ವಹಣೆಯ ಮೂಲಕ ಸಮಾಜಕ್ಕೆ ಉತ್ತಮ ಸೇವೆ ನೀಡಲಿ ಎಂದು ಆಶಿಸಿದರು.ನೂತನ ಅಧ್ಯಕ್ಷ ರಾಜಗೋಪಾಲ ರೈ ಮಾತನಾಡಿ, ಹಲವು ವರ್ಷಗಳ ಹಿಂದೆ ಕೇಟರಿಂಗ್ ಮಾಲೀಕರು ಸಂಘಟನೆ ಇಲ್ಲದೆ ಸ್ವತಂತ್ರವಾಗಿ ಕೆಲಸ ಮಾಡುತ್ತಿದ್ದರು. ಇದೀಗ ಜಿಲ್ಲೆಯ ಕೆಟರಿಂಗ್ ಮಾಲೀಕರನ್ನು ಒಟ್ಟು ಸೇರಿಸುವ ಮೂಲಕ ಸಂಘಟನೆಗೆ ಹೊಸ ಶಕ್ತಿಯನ್ನು ತುಂಬಲಾಗಿದೆ. ಸಂಘಟನಾ ಬಲದಿಂದ ಹಲವು ಸಾಮಾಜಿಕ ಕಾರ್ಯಗಳು ಯಶಸ್ವಿಯಾಗಿ ನಡೆದಿದೆ ಎಂದು ಹೇಳಿದರು.ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಮಾತನಾಡಿ, ಕೇಟರಿಂಗ್ ಒಂದು ಸೇವೆಯೇ ಹೊರತು ಉದ್ಯಮವಲ್ಲ, ಅದನ್ನು ಇದೇ ಮಾದರಿಯಲ್ಲಿ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದು ಶ್ಲಾಘಿಸಿದರು.ನಿಕಟಪೂರ್ವ ಅಧ್ಯಕ್ಷ ಸಂತೋಷ್ ಡಿ'ಸೋಜ ಅವರು ನಿಯೋಜಿತ ಅಧ್ಯಕ್ಷ ರಾಜಗೋಪಾಲ ರೈ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಹಾಗೂ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಸನ್ಮಾನ ಮಾಡಲಾಯಿತು.


ಉದ್ಯಮಿ ಸದಾನಂದ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಕಾರ್ಪೊರೇಟರ್ ಸಂದೀಪ್ ಗರೋಡಿ, ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ ಕಾರಂತ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಸಂಘದ ಗೌರವಾಧ್ಯಕ್ಷ ಸುಧಾಕರ ಕಾಮತ್, ಉದ್ಯಮಿಗಳಾದ ಇಕ್ಬಾಲ್ ಗೋಲ್ಡ್ ಪ್ಯಾಲೇಸ್, ಅಬ್ದುಲ್ ಕರೀಂ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  

Ads on article

Advertise in articles 1

advertising articles 2

Advertise under the article

IMG-20220907-WA0033 IMG_20220827_133242