ಸರ್ಕಾರಿ ನೌಕರರ ಸಂಘದ ಚುನಾವಣೆ ಅಸಿಂಧು: ಮಂಗಳೂರು ನ್ಯಾಯಾಲಯ

ಸರ್ಕಾರಿ ನೌಕರರ ಸಂಘದ ಚುನಾವಣೆ ಅಸಿಂಧು: ಮಂಗಳೂರು ನ್ಯಾಯಾಲಯ





ಮಹತ್ವದ ಬೆಳವಣಿಗೆಯೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣಾ ಪ್ರಕ್ರಿಯೆಯನ್ನು ಅಸಿಂಧು ಎಂದು ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ಘೋಷಿಸಿದೆ.



ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣಾ ಪ್ರಕ್ರಿಯೆ ನಿಯಮಾನುಸಾರವಾಗಿ ನಡೆದಿಲ್ಲ ಹಾಗೂ ಸಂಘದ ಬೈಲಾ ನಿಯಮಗಳಡಿ ಮತದಾರರ ಪಟ್ಟಿಯನ್ನು ತಯಾರಿಸಿಲ್ಲ ಎಂಬುದಾಗಿ ಮಾನ್ಯ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ಘೋಷಿಸಿದೆ. 


ಈ ಹಿನ್ನೆಲೆಯಲ್ಲಿ ಪದಾಧಿಕಾರಿಗಳ ಚುನಾವಣೆಯನ್ನು ಕ್ರಮಬದ್ಧವಾಗಿ ನಿಯಮಾನುಸಾರ ನಡೆಸುವಂತೆ ಚುನಾವಣಾ ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.



ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯ ಪ್ರಕ್ರಿಯೆ ಮುಕ್ತ, ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ನಡೆದಿಲ್ಲ ಎಂದು ಬಂದರು ಇಲಾಖೆಯ ಅಧಿಕಾರಿ ಶ್ರೀ ಎಸ್.ನಿರಂಜನ ಮೂರ್ತಿ ಅವರು ಜಿಲ್ಲಾ ಸಂಘ ಹಾಗೂ ಚುನಾವಣಾ ಅಧಿಕಾರಿಗಳ ವಿರುದ್ಧ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.



ದಾವೆಯ ವಿಚಾರಣೆಯನ್ನು ನಡೆಸಿ ದಿನಾಂಕ 24.8.2022 ರಂದು ತೀರ್ಪು ನೀಡಿದ ಮಾನ್ಯ ಪ್ರಧಾನ ನ್ಯಾಯಾಲಯವು ನಿಯಮಾನುಸಾರ ಚುನಾವಣಾ ಪ್ರಕ್ರಿಯೆ ನಡೆದಿಲ್ಲ ಎಂದು ಘೋಷಿಸಿ ಮತ್ತೆ ಚುನಾವಣೆ ನಡೆಸುವಂತೆ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

BREAKING NEWS
Loading latest news...
Join our WhatsApp Channel Powered By : Online Pudu