-->

ಕಡಬ: ಧ್ವಜಾರೋಹಣದ ವೇಳೆಯೇ ಕುಸಿದು ಬಿದ್ದು ಮೃತಪಟ್ಟ ನಿವೃತ್ತ ಯೋಧ

ಕಡಬ: ಧ್ವಜಾರೋಹಣದ ವೇಳೆಯೇ ಕುಸಿದು ಬಿದ್ದು ಮೃತಪಟ್ಟ ನಿವೃತ್ತ ಯೋಧ

ಕಡಬ: ದ.ಕ.ಜಿಲ್ಲೆಯ ಕಡಬ ಕುಟ್ರುಪಾಡಿ ಗ್ರಾಪಂ ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ಧ್ವಜಾರೋಹಣ ಮಾಡುತ್ತಿದ್ದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಇಂದು ನಡೆದಿದೆ.

ಹೊಸಮಠ ಸಿ.ಎ.ಬ್ಯಾಂಕ್ ನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದರು. ಈ ವೇಳೆ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ಧಪಡಿಸುತ್ತಿದ್ದರು. ಈ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ.

Ads on article

Advertise in articles 1

advertising articles 2

Advertise under the article