ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಸುಳ್ಯ: ಸುಳ್ಯ, ಕಡಬದ ಶಾಲೆಗಳಿಗೆ ನಾಳೆಯೂ ರಜೆ

ಸುಳ್ಯ: ಮೊನ್ನೆ ಸಂಜೆಯಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಳ್ಯ ಹಾಗೂ ಕಡಬ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಿಸಲಾಗಿದೆ.

ನಿನ್ನೆ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು ಕಡಬ ಹಾಗೂ ಸುಳ್ಯದ ಅಂಗನವಾಡಿ, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿತ್ತು. ಆದರೆ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಅಲ್ಲಲ್ಲಿ ನೀರು ನಿಲುಗಡೆಯಾಗಿ ದ್ವೀಪದಂತಾಗಿದೆ. ಆದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ  ನಾಳೆಯೂ ಕಡಬ ಹಾಗೂ ಸುಳ್ಯದ ಅಂಗನವಾಡಿ, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳಿಗೆ ರಜೆ ನೀಡಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.