ಉದ್ಯೋಗಾವಕಾಶ: ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ

ಉದ್ಯೋಗಾವಕಾಶ: ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ





ಮಂಗಳೂರಿನ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿಯಲ್ಲಿ ಪ್ರಸ್ತುತ ಖಾಲಿ ಇರುವ ವಿವಿಧ ಹುದ್ದೆಗಳನ್ನು ತುಂಬಲು ಸಂಸ್ಥೆಯು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.


ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಶಾಖೆಗಳನ್ನು ಹೊಂದಿದೆ.


ಅಭ್ಯರ್ಥಿಗಳು ಕಂಪ್ಯೂಟರ್ ಪರಿಣತಿ ಹೊಂದಿರಬೇಕು, ಸಹಕಾರಿಯ ಕೋರ್ಸು ಮಾಡಿರುವ ಹಾಗೂ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿರುವ (ಬಿಕಾಂ) ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಸಹಕಾರಿ ಸಂಸ್ಥೆಯಲ್ಲಿ ಅನುಭವ ಇರುವ 35 ವರ್ಷದ ಒಳಗಿನ ಯುವಕ- ಯುವತಿ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.


ಈ ಮೇಲಿನ ಹುದ್ದೆಗೆ ಸೇರಬಯಸುವ ಆಸಕ್ತ ಅಭ್ಯರ್ಥಿಗಳು ಸ್ವ ವಿವರ ಇರುವ ಅರ್ಜಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.



ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ

ಕರ್ನಾಟಕ ಬ್ಯಾಂಕಿನ ಮೇಲ್ಗಡೆ, 

ಮಿನಿ ವಿಧಾನಸೌಧ ಬಳಿ, ಮಂಗಳೂರು- 575001