ಉದ್ಯೋಗಾವಕಾಶ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ
ಮಂಗಳೂರಿನ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18 ಶಾಖೆಗಳನ್ನು ಹೊಂದಿದೆ.
ಸಾವಯವ ಕೃಷಿ ಮತ್ತು ಅದಕ್ಕೆ ಸಿಗುವ ಸವಲತ್ತುಗಳ ಬಗ್ಗೆ ರೈತರಿಗೆ ಸಮಗ್ರ ಮಾಹಿತಿ ನೀಡಬೇಕಾಗಿದೆ. ಕೃಷಿಕರಿಗೆ ತೋಟದಲ್ಲಿ ತರಬೇತಿ ನೀಡಲು ಮತ್ತು ಕ್ಷೇತ್ರದ ಭೇಟಿಗೆ ಅಭ್ಯರ್ಥಿಗಳು ಸಿದ್ಧರಿರಬೇಕು.
ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೊಮಾ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಆಸಕ್ತರು ಸ್ವ ವಿವರ ಇರುವ ಅರ್ಜಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.
ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ
ಭಗವತಿ ಕಾಂಪ್ಲೆಕ್ಸ್,
ಕಪಿತಾನಿಯೋ ಶಾಲೆ ಎದುರುಗಡೆ,
ಪಂಪ್‌ವೆಲ್, ಮಂಗಳೂರು- 575002
