ಬೆಂಗಳೂರು: ಉದ್ಯಮದ ವಿಚಾರವಾಗಿ ಕರೆಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಮಿಳುನಾಡಿನ ಉದ್ಯಮಿ

ಬೆಂಗಳೂರು: ಉದ್ಯಮ ಕುರಿತು ಮಾತುಕತೆಗೆಂದು ಯುವತಿಯೊಬ್ಬಳನ್ನು ಹೊಟೇಲ್ ಗೆ ಕರೆಸಿಕೊಂಡ ಕಾಮುಕ ಉದ್ಯಮಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮಿಳುನಾಡಿನ ಕಾಮುಕ ಉದ್ಯಮಿ ಇತ್ತೀಚೆಗೆ ಬೆಂಗಳೂರು ನಗರಕ್ಕೆ ಆಗಮಿಸಿ ಸಂಬಂಧಿ ಮೂಲಕ ಯುವತಿಯನ್ನು ಸಂಪರ್ಕಿಸಿದ್ದ. ಉದ್ಯಮ ಅಭಿವೃದ್ಧಿ ಬಗ್ಗೆ ಮತ್ತೆ ಮಾತನಾಡಲು ಇದೆ ಎಂದು ಆ.6ರಂದು ಹೊಟೇಲ್ ಗೆ ಕರೆಸಿಕೊಂಡಿದ್ದಾನೆ. ಆದರೆ ಆತ ಉದ್ಯಮ ಸಂಬಂಧ ಮಾತನಾಡುವ ಬದಲು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಅಲ್ಲದೆ ಯಾರಿಗೂ ವಿಚಾರ ತಿಳಿಸದಂತೆ ಬೆದರಿಕೆಯೊಡ್ಡಿದ್ದಾನೆ‌. ಅಲ್ಲಿಂದ ತಪ್ಪಿಸಿಕೊಂಡು ಓಡಿ ಬಂದ ಯುವತಿ ತನ್ನ ಕುಟುಂಬಸ್ಥರಿಗೆ ವಿಚಾರ ತಿಳಿಸಿದ್ದಾಳೆ. ಆ ಬಳಿಕ ಠಾಣೆಗೆ ಬಂದು ದೂರು ನೀಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. 
BREAKING NEWS
Loading latest news...
Join our WhatsApp Channel Powered By : Online Pudu