ಸುಬ್ರಹ್ಮಣ್ಯ: ಮನೆಮೇಲೆ ಕುಸಿದುಬಿದ್ದ ಗುಡ್ಡ; ಮಕ್ಕಳಿಬ್ಬರು ಸೇರಿ ಮನೆಮಂದಿ ಮಣ್ಣಿನಡಿಗೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಸಂಜೆಯ ಬಳಿಕ ಭಾರೀ ಮಳೆಯಾಗುತ್ತಿದ್ದು, ಕುಮಾರಧಾರ ನದಿ ಸಮೀಪದ ಪರ್ವತಮುಖಿ ಎಂಬಲ್ಲಿ ಗುಡ್ಡ ಕುಸಿತಗೊಂಡು ಮನೆ ಸಂಪೂರ್ಣ ಹಾನಿಗೊಳಗಾಗಿದೆ‌. ಪರಿಣಾಮ ಮನೆಯೊಳಗಿದ್ದ ಮಕ್ಕಳಿಬ್ಬರು ಸೇರಿ ಮನೆಮಂದಿ ಮಣ್ಣಿನಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.

ಸಂಜೆಯಿಂದ ಸುರಿಯಿತ್ತಿರುವ ಧಾರಾಕಾರವಾದ ಜಡಿ ಮಳೆಗೆ ಏಕಾಏಕಿ ಮನೆಯ ಹಿಂಭಾಗದ ಗುಡ್ಡ ಕುಸಿದು ಮನೆಯ ಮೇಲೆಯೇ ಬಿದ್ದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಧಾವಿಸಿದ್ದಾರೆ. ಮಣ್ಣಿನಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
BREAKING NEWS
Loading latest news...
Join our WhatsApp Channel Powered By : Online Pudu